ಈಗಿನ ಸುದ್ದಿ

ಕಾಂಗ್ರೆಸ್‌ನಲ್ಲಿ ಬುದ್ಧ ಸಿದ್ಧಾಂತ ಪರಿಪಾಲನೆ: ರಾಹುಲ್

ಕಾಂಗ್ರೆಸ್‌ನಲ್ಲಿ ಬುದ್ಧ ಸಿದ್ಧಾಂತ ಪರಿಪಾಲನೆ: ರಾಹುಲ್
Published On :

ವಾರಾಣಾಸಿ: ಬುದ್ಧ ಸಿದ್ಧಾತಂ ಪರಿಪಾಲನೆ ಮಾಡುವ ಏಕೈಕ ಪಕ್ಷ ಕಾಂಗ್ರೆಸ್, ಪ್ರೀತಿ ಮತ್ತು ಶಾಂತಿ ಬದುಕಲು ಇಚ್ಛಿಸುತ್ತದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಪ್ರೀತಿ ಮತ್ತು ಶಾಂತಿ ಕಾಂಗ್ರೆಸ್ ಪಕ್ಷದ ಸಂಕೇತವಾಗಿದೆ. ಇವರೆಡನ್ನು ದೇಶದ ಜನತೆಗೆ ನಾವು ನೀಡಬೇಕಿದೆ ಎಂದು ರಾಹುಲ್ ತಿಳಿಸಿದ್ದಾರೆ.

ಇಂದು ವಾರಣಾಸಿಯಲ್ಲಿ ರೋಡ್ ಶೋ ನಡೆಸಿದ ನಂತರ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಬಿಜೆಪಿಯ ಪ್ರಬಲ ವ್ಯಕ್ತಿ ನರೇಂದ್ರ ಮೋದಿ ಭಾರತೀಯ ವಾಯು ಪಡೆಗೆ ಗುಜರಾತ್‌ನಲ್ಲಿ ನೆಲ ನೀಡದೆ ವಂಚಿಸಿದ್ದಾರೆ ಎಂದು ದೂರಿದ್ದಾರೆ.

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್‌ನಲ್ಲಿ ಮಂಡಿಸಿದೆ. ಆಹಾರ ಕಾಯ್ದೆ ಜಾರಿಗೊಳಿಸಿದೆ. ಬಡವರಿಗಾಗಿ ದುಡಿಯುತ್ತಿರುವ ಕಾಂಗ್ರೆಸ್, ಕಡಿಮೆ ರಿಯಾಯಿತಿ ದರದಲ್ಲಿ ಹಾಗೂ ಬಡವರಿಗೆ ಉಚಿತ ಔಷಧ ಪೂರೈಸಲು ಆರೋಗ್ಯ ಕಾಯ್ದೆ ಹೊರತಂದಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಸಮಾಜವಾದಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ರಾಹುಲ್, ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತಡೆಗಟ್ಟುವಲ್ಲಿ ಸಮಾಜವಾದಿ ಪಕ್ಷ ವಿಫಲವಾಗಿದೆ ಹಾಗೂ ಯೋಜನೆಗಳನ್ನು ಜಾರಿಗೊಳಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉಚಿತ ಔಷಧ ಪೂರೈಕೆ ಮಾಡಲಾಗುವುದು ಎಂದ ರಾಹುಲ್, ಮಹೀಳಾ ಸಬಲೀಕರಣಕ್ಕಾಗಿ ಕಾಂಗ್ರೆಸ್ ಶ್ರಮಿಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.