ಭಾಗವತ್‌ರನ್ನು 2 ಬಾರಿ ಭೇಟಿ ಮಾಡಿದ ರಾಜನಾಥ್ ಸಿಂಗ್

ನವದೆಹಲಿ: ಕೇವಲ 24 ಗಂಟೆಯಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು 2 ಭಾರಿ ಭೇಟಿ ಮಾಡುವ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರು ಕುತೂಹಲ ಮೂಡಿಸಿದ್ದಾರೆ.
ನಿನ್ನೆ ರಾತ್ರಿಯಷ್ಟೇ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರೊಂದಿಗೆ ಆರ್‌ಎಸ್‌ಎಸ್ ಕಚೇರಿಯಲ್ಲಿ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ್ದ ರಾಜನಾಥ್ ಸಿಂಗ್, ಸುಮಾರು 1 ಗಂಟೆಗಳ ಕಾಲ ಚುನಾವಣೆ ಕುರಿತಂತೆ ಚರ್ಚೆ ನಡೆಸಿದ್ದರು. ಆದರೆ ಅಚ್ಚರಿಯ ವಿಷಯವೆಂದೆರೆ ಇಂದು ಬೆಳಗ್ಗೆ ಕೂಡ ಮೋಹನ್ ಭಾಗವತ್ ಅವರನ್ನು ರಾಜನಾಥ್ ಸಿಂಗ್ ಅವರು ಭೇಟಿ ಮಾಡಿದ್ದಾರೆ.
ವಾರಣಾಸಿ ಲೋಕಸಭಾ ಚುನಾವಣೆಯ 9ನೇ ಮತ್ತು ಕೊನೆಯ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿರುವ ಈ ಹಂತದಲ್ಲಿ ರಾಜನಾಥ್ ಸಿಂಗ್ ಅವರ ಭೇಟಿ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಹಿಂಧೂಗಳ ಮತ್ತು ಮುಸ್ಲಿಂ ಅಲ್ಪ ಸಂಖ್ಯಾತರ ಮತಗಳೇ ನಿರ್ಣಾಯಕ ಪಾತ್ರವಹಿಸುವ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ನಾಳೆ ಮತದಾನ ನಡೆಯಲಿದ್ದು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಕೂಡ ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ರಾಜನಾಥ್ ಸಿಂಗ್ ಅವರ ಭೇಟಿ ಕುತೂಹಲ ಮೂಡಿಸಿದೆ.
ಭೇಟಿ ವೇಳೆ ಆರ್‌ಎಸ್‌ಎಸ್ ಮತ್ತೋರ್ವ ಮುಖ್ಯಸ್ಥ ಭಯ್ಯಾಜಿ ಜೋಷಿ, ಬಿಜೆಪಿ ಮುಖಂಡ ಸುರೇಶ್ ಸೋನಿ ಅವರು ಉಪಸ್ಥಿತರಿದ್ದರು. ನಿನ್ನೆ ಭಾಗವತ್ ಅವರನ್ನು ಭೇಟಿ ಮಾಡಿದ್ದ ನರೇಂದ್ರ ಮೋದಿ ಅವರು ಬಳಿಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.
ವಾರಣಾಸಿಯಲ್ಲಿ ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಅಭ್ಯರ್ಥಿಗಳ ಮನೆ ಮನೆ ಪ್ರಚಾರ ಇಂದು ಸಂಜೆ ಅಂತ್ಯಗೊಳ್ಳಲಿದೆ. ಕೇಂದ್ರ ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನಾಳೆ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಲಿದೆ. ಮೇ 16ರಂದು ಮತಎಣಿಕೆ ಕಾರ್ಯ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


