ಈಗಿನ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಚಿಕ್ಕೋಡಿ ಪ್ರಥಮ, ಶಿರಸಿ ದ್ವಿತೀಯ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಚಿಕ್ಕೋಡಿ ಪ್ರಥಮ, ಶಿರಸಿ ದ್ವಿತೀಯ
Published On :

ಶೇ 80.19ರಷ್ಟು ಫಲಿತಾಂಶ, ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೈಕ್ಷಣಿಕ ಜಿಲ್ಲೆ ಶಿರಸಿಗೆ ಎರಡನೇ ಸ್ಥಾನ, ಬೆಳಗಾವಿ ಮೂರು ಹಾಗೂ ಬೀದರ್ಗೆ ಕಡೆಯ ಸ್ಥಾನ

ಬೆಂಗಳೂರು:
2013-14ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಈ ಬಾರಿ ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿ ಶೇ.91.7ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಶೈಕ್ಷಣಿಕ ಜಿಲ್ಲೆ ಶಿರಸಿ ಶೇ.90.73ರಷ್ಟು ಫಲಿತಾಂಶ ಪಡೆಯುವುದರೊಂದಿಗೆ ಎರಡನೇ ಸ್ಥಾನ ಹಾಗೂ ಬೆಳಗಾವಿ ಶೇ.89.91ರಷ್ಟು ಫಲಿತಾಂಶದೊಂದಿಗೆ ಮೂರನೇ ಸ್ಥಾನ ಪಡೆದುಕೊಂಡಿದೆ. ಇನ್ನು ಬೀದರ್ ಜಿಲ್ಲೆ ಶೇ.75.35ರಷ್ಟು ಫಲಿತಾಂಶದೊಂದಿಗೆ ಕಡೆಯ ಸ್ಥಾನ ಪಡೆದುಕೊಂಡಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು, ಪ್ರಸಕ್ತ ವರ್ಷ ಶೇ 80.19ರಷ್ಟು ಫಲಿತಾಂಶವಾಗಿದ್ದು, ರಾಜ್ಯದ 17 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಪ್ರಕಟವಾಗಿದೆ ಎಂದು ಹೇಳಿದರು.

ಒಟ್ಟು 46,963 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 2,63,346 ವಿದ್ಯಾರ್ಥಿಗಳಉ ಪ್ರಥಮ ದರ್ಜೆಯಲ್ಲಿ ಹಾಗೂ 1,45,649 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ.

ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಹಾಗೂ ಉತ್ತರ ಪತ್ರಿಕೆ ಪ್ರತಿ ಪಡೆಯಲು ಮೇ 22 ಕೊನೆಯ ದಿನವಾಗಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 28 ಕಡೆಯ ದಿನವಾಗಿದೆ ಎಂದು ಸಚಿವರು ತಿಳಿಸಿದರು.

ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು
ಮೈಸೂರಿನ ಮರಿಮಲ್ಲಪ್ಪ ಶಾಲೆಯ ನಿತ್ಯಾ ಸುರಭಿ 622 ಅಂಕಗಳನ್ನು ಪಡೆಯು ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಎರಡನೇ ಸ್ಥಾನ
ಸಿಂಧು, ಬೆಂಗಳೂರು ಉತ್ತರ (621)
ಅಭಿಲಾಷ್, ಬೆಂಗಳೂರು ಉತ್ತರ(621)
ಧನ್ಯ, ಬೆಂಗಳೂರು ಉತ್ತರ (621)
ಅಭಿಜ್ಞಾ, ಬೆಂಗಳೂರು ಉತ್ತರ (621)

ಮೂರನೇ ಸ್ಥಾನ
ಹೇಮಾವತಿ, ಮೈಸೂರು (620)
ಮೈಥಿಲಿ, ಬೆಂಗಳೂರು ಉತ್ತರ (620)
ಅಕ್ಷಯ್ ಬೆಂಗಳೂರು ದಕ್ಷಿಣ (620)
ರಾಹುಲ್ ಬೆಂಗಳೂರು ದಕ್ಷಿಣ (620)


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.