ಕೊನೆ ಹಂತ: ಬಿರುಸುಗೊಂಡ ಮತದಾನ

ನವದೆಹಲಿ: ಲೋಕಸಭೆಯ ಚುನಾವಣೆಯ 9ನೇ ಹಾಗೂ ಕೊನೆಯ ಹಂತದ ಮತದಾನ ಸೋಮವಾರ ಆರಂಭವಾಗಿದ್ದು, ಮೂರು ರಾಜ್ಯಗಳ 41 ಕ್ಷೇತ್ರಗಳಿಗೆ ಬಿರುಸಿನ ಮತದಾನ ನಡೆಯುತ್ತಿದೆ.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹಾಗೂ ಕಾಂಗ್ರೆಸ್ ನಾಯಕ ಅಜಯ್ ರಾವ್ ಸೇರಿದಂತೆ ಹಲವು ಘಟಾನುಘಟಿ ನಾಯಕರು ಇಂದಿನ ಕಣದಲ್ಲಿದ್ದಾರೆ.
ಉತ್ತರ ಪ್ರದೇಶ 18, ಪಶ್ಚಿಮ ಬಂಗಾಳದ 17 ಹಾಗೂ ಬಿಹಾರದ 6 ಲೋಕಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.
ಮಧ್ಯಾಹ್ನ 3 ಗಂಟೆಯವರೆಗೆ ಶೇಕಡವಾರು ಮತದಾನ
ಉತ್ತರ ಪ್ರದೇಶ ಶೇ. 44 ರಷ್ಟು
ಪಶ್ಚಿಮ ಬಂಗಾಳ ಶೇ. 67 ರಷ್ಟು
ಬಿಹಾರ ಶೇ. 48.6 ರಷ್ಟು
ಅಜಯ್ ರಾಯ್ ವಿರುದ್ಧ ಎಫ್ಐಆರ್
ನೀತಿ ಸಂಹಿತೆ ಉಲ್ಲಂಘಿಸಿ ಮತಗಟ್ಟೆಯಲ್ಲಿ ಪಕ್ಷದ ಚಿಹ್ನೆ ಪ್ರದರ್ಶಿಸಿದ ವಾರಣಸಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಚುನಾವಣಾ ಆಯೋಗ ಜಿಲ್ಲಾ ಆಡಳಿತಕ್ಕೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


