ದಾಖಲೆ ಮತದಾನ: ದೇಶಾದ್ಯಂತ ಶೇ.66ರಷ್ಟು ಮತ ಚಲಾವಣೆ

ನವದೆಹಲಿ: ಲೋಕಸಭಾ ಚುನಾವಣೆಯ 9ನೇ ಮತ್ತು ಕೊನೆಯ ಹಂತದ ಮತಚಲಾವಣೆ ಕಾರ್ಯ ಅಂತ್ಯಗೊಂಡಿದ್ದು, ದೇಶಾದ್ಯಂತ ಒಟ್ಟು ಶೇ.66.38 ರಷ್ಟು ಮತದಾನವಾಗಿದೆ.
ಮೂರು ರಾಜ್ಯಗಳ 41 ಸ್ಥಾನಗಳಿಗೆ ಇಂದು ನಡೆದ 9ನೇ ಮತ್ತು ಕೊನೆಯ ಹಂತದ ಮತದಾನದಲ್ಲಿ ಶೇ. 62ರಷ್ಟು ಮತದಾನವಾಗಿದೆ ಎಂದು ತಿಳಿದು ಬಂದಿದೆ. ಪ್ರತಿಷ್ಟಿತ ಲೋಕಸಭಾ ಕ್ಷೇತ್ರಗಳಾಗ ವಾರಣಾಸಿ, ಅಮೇಥಿ, ರಾಯ್ ಬರೇಲಿ ಕ್ಷೇತ್ರಗಳಲ್ಲಿ ಬಿರುಸಿನ ಮತದಾನವಾಗಿದೆ. ಇಂದು ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಅಂತ್ಯವಾಗಿದ್ದು, ಕೇಂದ್ರ ಚುನಾವಣಾ ಆಯೋಗ ಮತದಾನದ ವಿವರವನ್ನು ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಮತದಾನವಾಗಿದ್ದು, ಅಲ್ಲಿ ಒಟ್ಟಾರೆ ಶೇ.81.77ರಷ್ಟು ಮತದಾನವಾಗಿದೆ. ಇದೇ ಮೇ 16ರಂದು ಫಲಿತಾಂಶ ಪ್ರಕಟವಾಗಲಿದೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ದಾಖಲೆ ಪ್ರಮಾಣದ ಶೇ.66.01ರಷ್ಟು ಮತದಾನವಾಗಿದೆ. 3 ದಶಕಗಳಲ್ಲಿಯೇ ಅತ್ಯಧಿಕ ಮತದಾನವಾಗಿದ್ದು, 1984 ಮತ್ತು 85ರಲ್ಲಿ ನಡೆದ ಚುನಾವಣೆಯಲ್ಲಿ ಶೇ.64.1ರಷ್ಟು ಮತದಾನವಾಗಿತ್ತು.
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆ ನಂತರ ನಡೆದ ಮೊದಲ ಚುನಾವಣೆ ಇದಾಗಿದ್ದರಿಂದ ಭಾರಿ ಸಂಖ್ಯೆಯಲ್ಲಿ ಮತದಾನವಾಗಿತ್ತು. ಅಲ್ಲದೆ ಗಾಂಧಿ ಕುಟುಂಬದ ಮೇಲಿದ್ದ ಸಿಂಪತಿ ಅಲೆಯನ್ನು ಬಲವಾಗಿ ಬಳಿಸಿಕೊಂಡ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಅಂದು ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವುದರೊಂದಿಗೆ ಇಂದಿರಾಗಾಂಧಿ ಅವರ ಪುತ್ರ ರಾಜೀವ್ ಗಾಂಧಿ ಅವರು ಪ್ರಧಾನಿ ಪಟ್ಟಕ್ಕೇರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


