ಮುನ್ಸಿಪಲ್ ಚುನಾವಣೆ: ಸೀಮಾಂಧ್ರದಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ

ಹೈದರಾಬಾದ್: ಆಂಧ್ರಪ್ರದೇಶ ಮುನ್ಸಿಪಲ್ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಸೀಮಾಂಧ್ರ ಭಾಗದಲ್ಲಿ ಕಾಂಗ್ರೆಸ್ಗೆ ತೀವ್ರ ಮುಖಭಂಗವಾಗಿದೆ.
ಕಳೆದ ಮಾರ್ಚ್ 30ರಂದು ನಡೆದ ಮುನ್ಸಿಪಲ್ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ. ಆಂಧ್ರ ಪ್ರದೇಶ ರಾಜ್ಯ ವಿಭಜನೆ ಪರಿಣಾಮ ಇದೀಗ ಕಾಂಗ್ರೆಸ್ ಪಕ್ಷದ ಮೇಲೆ ಆಗಿದ್ದು, ಮುನ್ಸಿಪಲ್ ಚುನಾವಣೆಯಲ್ಲಿ ಸೀಮಾಂಧ್ರ ಭಾಗದ ಜನರು ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. 13 ಜಿಲ್ಲೆಗಳನ್ನು ಹೊಂದಿರುವ ಸೀಮಾಂಧ್ರ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಒಂದೇ ಒಂದು ಸ್ಥಾನವನ್ನೂ ಗಳಿಸದೇ ತೀವ್ರ ಮುಖಭಂಗಕ್ಕೀಡಾಗಿದೆ. ತೆಲುಗು ದೇಶಂ ಪಕ್ಷ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. ಒಟ್ಟು ಐದು ಕಾರ್ಪೊರೇಷನ್ ಮತ್ತು 58 ಮುನ್ಲಿಪಾಲಿಟಿ ಸ್ಥಾನಗಳು ತೆಲುಗು ದೇಶಂ ಪಕ್ಷದ ಪಾಲಾಗಿವೆ. ಉಳಿದಂತೆ 2 ಕಾರ್ಪೊರೇಷನ್ ಮತ್ತು 16 ಮುನ್ಸಿಪಾಲಿಟಿ ಸ್ಥಾನಗಳನ್ನು ಹೊಂದಿರುವ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನದಲ್ಲಿದೆ.
ಆದರೆ ತೆಲಂಗಾಣ ಭಾಗದಲ್ಲಿ ಇದಕ್ಕೆ ತದ್ವಿರುದ್ಧ ಪರಿಸ್ಥಿತಿ ಇದ್ದು, ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಟಿಆರ್ಎಸ್ ಪಕ್ಷಗಳು ಹೆಚ್ಚು ಸ್ಥಾನಗಳನ್ನು ಗಳಿಸಿವೆ. ತೆಲಂಗಾಣ ಭಾಗದಲ್ಲಿ ಕಾಂಗ್ರೆಸ್ ಪಕ್ಷ 16 ಮುನ್ಸಿಪಾಲಿಟಿ ಸ್ಥಾನಗಳನ್ನು ಗಳಿಸಿಕೊಂಡಿದೆ. ಒಟ್ಟಾರೆಯಾಗಿ ಸೀಮಾಂಧ್ರ ಭಾಗದಲ್ಲಿ ತೆಲುಗು ದೇಶಂ ಪಕ್ಷ ಒಟ್ಟು 1,446 (ವಾರ್ಡ್) ಸ್ಥಾನಗಳನ್ನು ಗಳಿಸಿದ್ದು, ವೈಎಸ್ಆರ್ ಕಾಂಗ್ರೆಸ್ ಪಕ್ಷ 852 (ವಾರ್ಡ್) ಸ್ಥಾನಗಳನ್ನು ಗಳಿಸಿದೆ.
ಆಂಧ್ರ ಪ್ರದೇಶ ವಿಭಜನೆ ನಿರ್ಧಾರ ಕಾಂಗ್ರೆಸ್ ಪಕ್ಷದ ಪಾಲಿಗೆ ದುಬಾರಿಯಾಗಿ ಪರಿಣಮಿಸಿದ್ದು, ಸೀಮಾಂಧ್ರ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮರ್ಮಾಘಾತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


