ಆಲೂರರ ನಾಲ್ಕು ಪುಸ್ತಕ ಲೋಕಾರ್ಪಣೆ

ಬೆಂಗಳೂರು: ಸಾಹಿತಿ ಚಂದ್ರಶೇಖರ ಆಲೂರ ಅವರ ನಾಲ್ಕು ಪುಸ್ತಕಗಳನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಔಟರ್ ಸಿಗ್ನಲ್, ಅಕ್ಷರ ಆಟಾಟೋಪ, ಹೀಗೊಂದು ದಾಂಪತ್ಯ ಗೀತೆ ಮತ್ತು ಲಖನೌ ಡೈರಿ ಎಂಬ ನಾಲ್ಕು ಪುಸ್ತಗಳನ್ನು ಬಿಡುಗಡೆ ಮಾಡಲಾಯಿತು. ಖ್ಯಾತ ಕವಿ ಎಚ್.ಎಸ್ ವೆಂಕಟೇಶ್ ಮೂರ್ತಿ ಅವರು ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಅನ್ನಪೂರ್ಣ ಪ್ರಕಾಶನದ ಸಿರಿಗೇರಿ ಯರಿಸ್ವಾಮಿ, ಭಕ್ತರಹಳ್ಳಿ ಕಾಮರಾಜ್ ಮತ್ತು ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಉಪಸ್ಥಿತರಿದ್ದರು.
ಸಾಹಿತಿ ಬರಗೂರು ರಾಮಚಂದ್ರಪ್ಪ, ಕಥೆಗಾರ ಕೇಶವ ಮಳಗಿ, ವಾರ್ತಾ ಇಲಾಖೆ ನಿರ್ದೇಶಕರಾದ ವಿಶುಕುಮಾರ್, ಜೀವನ್ಮುಖಿ ಪತ್ರಿಕೆಯ ಸತೀಶ್ ಜವರೇಗೌಡ, ಸುರೇಶ್ ಜವರೇಗೌಡ, ಛಾಯಾಗ್ರಾಹಕ ಮಲ್ಲಿಕಾರ್ಜುನ್ ಡಿ.ಜಿ. ಪತ್ರಕರ್ತೆ ವಿದ್ಯಾರಶ್ಮಿ ಪೆಲತ್ತಡ್ಕ, ಅವಧಿ ಡಾಟ್ಕಾಮ್ ನ ಸಂಧ್ಯಾರಾಣಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಹಾಜರಿದ್ದರು.
ಯುವ ಗಾಯಕಿ ಸ್ಪರ್ಶ ತಮ್ಮ ಭಾವಗೀತೆಗಳಿಂದ ಪ್ರೇಕ್ಷಕರನ್ನು ತಣಿಸಿದರು.
ಚಿತ್ರಗಳು: ಹರ್ಷವರ್ಧನ್
ಆಲೂರರ ಕೃತಿ ಬಿಡುಗಡೆ ಸಂಭ್ರಮದ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


