ಗಡ್ಕರಿಗೆ ಮತ್ತೆ ಅಧ್ಯಕ್ಷ ಗಾದಿ!

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಅವರಿಗೆ ಮತ್ತೆ ಬಿಜೆಪಿ ಅಧ್ಯಕ್ಷ ಗಾದಿ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವ ಈ ಹೋತ್ತಿನಲ್ಲಿ ಸರ್ಕಾರ ರಚಿಸುವ ಉತ್ಸಾಹದಲ್ಲಿರುವ ಬಿಜೆಪಿಯಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕಷ್ಟು ಬಿಜೆಪಿ ಸದಸ್ಯರು ಕೇಂದ್ರ ಸಚಿವರಾಗುವ ಕನಸು ಕಾಣುತ್ತಿದ್ದಾರೆ. ಅಂತೆಯೇ ಇದಕ್ಕಾಗಿ ಈಗಿನಿಂದಲೇ ಸಾಕಷ್ಚು ಲಾಬಿ ಕೂಡ ನಡೆಯುತ್ತಿವೆ. ಈ ಪಟ್ಟಿಯಲ್ಲಿ ಬಿಜೆಪಿಯ ಈ ಹಿಂದಿನ ರಾಜ್ಯಾಧ್ಯಕ್ಷ ನಿತಿನ್ ಗಡ್ಕರಿ ಅವರು ಕೂಡ ಸೇರಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ನಿತಿನ್ ಗಡ್ಕರಿ ಅವರು, ಈ ಸಂಬಂಧ ಈಗಾಗಲೇ ಮೊದಲ ಸುತ್ತಿನ ಮಾತುಕತೆ ಪೂರ್ಣಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ನಿತಿನ್ ಗಡ್ಕರಿ ಅವರು ಈ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಅಹ್ಮದಾಬಾದ್ನಲ್ಲಿ ಬಿಜೆಪಿ ಪ್ರಧಾನಿ ಅಭರ್ಥಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಗಡ್ಕರಿ ಅವರು ಇದೇ ವಿಚಾರವಾಗಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ನರೇಂದ್ರ ಮೋದಿ ಅವರು ಕೂಡ ಗಡ್ಕರಿ ಅವರ ಪ್ರಸ್ತಾಪಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಗಡ್ಕರಿ ಅವರ ಮೇಲಿರುವ ಆದಾಯ ತೆರಿಗೆ ವಂಚನೆ ಮತ್ತು ತಮ್ಮ ಪ್ರಭಾವವನ್ನು ಬಳಸಿ ರಿಯಲ್ ಎಸ್ಟೇಟ್ ಉಧ್ಯಮದಲ್ಲಿ ಸಾಕಷ್ಟು ಲಾಭ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಅವರ ಅಧ್ಯಕ್ಷಗಾದಿಗೆ ಮುಳುವಾಗುವ ಸಾಧ್ಯತೆ ಇದೆ. ಅಂತೆಯೇ ಪ್ರಸ್ತುತ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಈಗಗಾಲೇ ತಾವು ಮೋದಿ ಸರ್ಕಾರದಲ್ಲಿ ಪಾಲ್ಗೊಳ್ಳುವುದಿಲ್ಲ. ಅಧ್ಯಕ್ಷರಾಗಿಯೇ ಮುಂದುವರೆಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ ಮತ್ತೆ ಅಧ್ಯಕ್ಷ ಗಾದಿಗೇರುವ ಕನಸು ಕಾಣುತ್ತಿರುವ ಗಡ್ಕರಿ ಅವರು ಸಾಕಷ್ಟು ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


