ಈಗಿನ ಸುದ್ದಿ

ಹೈದರಾಬಾದ್‌ನಲ್ಲಿ ಕೋಮು ಘರ್ಷಣೆ: ಪೊಲೀಸರ ಗುಂಡಿಗೆ 2 ಸಾವು

ಹೈದರಾಬಾದ್‌ನಲ್ಲಿ ಕೋಮು ಘರ್ಷಣೆ: ಪೊಲೀಸರ ಗುಂಡಿಗೆ 2 ಸಾವು
Published On :

ಹೈದರಾಬಾದ್: 2 ಕೋಮಿನ ನಡುವೆ ಸಂಭವಿಸಿದ ಗುಂಪು ಘರ್ಷಣೆಯನ್ನು ನಿಯಂತ್ರಿಸಲು ಪೊಲೀಸರು ಹಾರಿಸಿದ ಗುಂಡಿಗೆ ಇಬ್ಬರು ಸಾವನ್ನಪ್ಪಿದ ಘಟನೆ ಬುಧವಾರ ಹೈದರಾಬಾದ್‌ನಲ್ಲಿ ನಡದಿದೆ.

ಹೈದರಾಬಾದ್ ಕಿಶನ್‌ಬಾಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಕೋಮು ಘರ್ಷಣೆಯಲ್ಲಿ ಇಬ್ಬರು ಹತರಾಗಿದ್ದು, ಕನಿಷ್ಟ 7ಮಂದಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರಾದರೂ, ಭಾರಿ ಸಂಖ್ಯೆಯಲ್ಲಿದ್ದ ಜನರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಬೇರೆ ದಾರಿ ಇಲ್ಲದೆ ಪೊಲೀಸರು ಗಲಭೆ ನಿರತರತ್ತ ಗುಂಡು ಹಾರಿಸಿದ್ದಾರೆ.

ಈ ವೇಳೆ ಇಬ್ಬರು ಸಾವನ್ನಪ್ಪಿದ್ದು, 7ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ. ಪ್ರಸ್ತುತ ಗಲಭೆ ಪೀಡಿತ ಕಿಶನ್‌ಬಾಗ್ ಪ್ರದೇಶದ ಸುತ್ತಮುತ್ತ ಕರ್ಫ್ಯೂ ಜಾರಿ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಅಲ್ಲದೆ ಮೀಸಲು ಸಶಸ್ತ್ರ ಪೊಲೀಸ್ ಪಡೆ, ಅಗ್ನಿ ಶಾಮಕ ಪಡೆ, ಸಿಆರ್‌ಪಿಎಫ್ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬ್ಬಂದಿಗಳು ಗಲಭೆ ಪೀಡಿತ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದಾರೆ.

ಗಲಭೆ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಅನುರಾಗ್ ಶರ್ಮಾ ಅವರು, '2 ಕೋಮಿನ ನಡುವೆ ಘರ್ಷಣೆ ಸಂಭವಿಸಿರುವುದು ನಿಜ. ಆದರೆ ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸ್ಥಳದಲ್ಲಿ ತಾತ್ಕಾಲಿಕ ಕರ್ಫೂ ಜಾರಿ ಮಾಡಲಾಗಿದೆ. ಅಲ್ಲದೆ ಹೆಚ್ಚು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ' ಎಂದು ತಿಳಿಸಿದರು.

ಆಂಧ್ರಪ್ರದೇಶ ವಿಭಜನೆ ಬಳಿಕ ಉಂಟಾದ ರಾಜಕೀಯ ಅರಾಜಕತೆಯಿಂದಾಗಿ ಪ್ರಸ್ತುತ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದ್ದು, ರಾಜ್ಯಪಾಲ ಇಎಸ್‌ಎಲ್ ನರಸಿಂಹನ್ ಅವರು, ಆಂಧ್ರ ಪ್ರದೇಶದ ಆಡಳಿತದ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಸ್ವತಃ ರಾಜ್ಯಪಾಲ ನರಸಿಂಹನ್ ಅವರು ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದು, ಕಾನೂನು ಮತ್ತು ಸುವ್ಯವ್ಯಸ್ಥೆ ನಿಂಯತ್ರಣಾಧಿಕಾರ ಕೂಡ ಹೊಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.