ಈಗಿನ ಸುದ್ದಿ

ಭಯೋತ್ಪಾದಕರೇಕೆ ಒಂದೇ ಕೋಮಿನವರಾಗಿರುತ್ತಾರೆ..?

ಭಯೋತ್ಪಾದಕರೇಕೆ ಒಂದೇ ಕೋಮಿನವರಾಗಿರುತ್ತಾರೆ..?
Published On :

ನವದೆಹಲಿ: ಭಯೋತ್ಪಾದಕರೇಕೆ ಒಂದೇ ಕೋಮಿನವರಾಗಿರುತ್ತಾರೆ ಎಂದು ಹೇಳುವ ಮೂಲಕ ಬಿಹಾರ ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ಅವರು ಮತ್ತೆ ವಿವಾದವೊಂದರ ಕೇಂದ್ರಬಿಂದುವಾಗಿದ್ದಾರೆ.

ಈ ಹಿಂದೆ ನರೇಂದ್ರ ಮೋದಿ ಅವರನ್ನು ದ್ವೇಷಿಸುವವರು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಗಿರಿರಾಜ್ ಸಿಂಗ್ ಅವರು ಇಂದು ಮತ್ತೆ ಅಂಥಹುದೇ ಮತ್ತೊಂದು ವಿವಾದಕ್ಕೀಡಾಗಿದ್ದಾರೆ.

ಖಾಸಗಿ ವಿಚಾರ ಸಂಕೀರ್ಣದಲ್ಲಿ ಪಾಲ್ಗೊಂಡಿದ್ದ ಗಿರಿರಾಜ್ ಸಿಂಗ್ ಅವರು, 'ಭಯೋತ್ಪಾದನಾ ಚಟುವಟಿಕೆಯಲ್ಲಿ ಸೆರೆಸಿಕ್ಕವರೆಲ್ಲರೂ ಒಂದೇ ಕೋಮಿಗೆ ಸೇರಿದವರಾಗಿರುತ್ತಾರೆ. ಇದು ಸತ್ಯವಲ್ಲವೇ..? ನಾನು ಯಾವುದೇ ಒಂದು ಕೋಮಿನ ವಿರುದ್ಧ ಮಾತನಾಡುತ್ತಿಲ್ಲ. ಆದರೆ ಇದು ಎಲ್ಲರಿಗೂ ತಿಳಿದಿರುವ ಸತ್ಯ. ಜಾತ್ಯಾತೀತರೆಂದು ಮುಖವಾಡ ಧರಿಸಿರುವವರೇಕೆ ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ' ಎಂದು ಪ್ರಶ್ನಿಸಿದ್ದಾರೆ.

ಗಿರಿರಾಜ್ ಸಿಂಗ್ ಅವರ ಹೇಳಿಕೆ ವಿಚಾರ ಇದೀಗ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಹಿಂದೆ ನರೇಂದ್ರ ಮೋದಿ ಅವರನ್ನು ಪ್ರಸನ್ನಗೊಳಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದ ಗಿರಿರಾಜ್ ಸಿಂಗ್ ಅವರಿಗೆ ಷರತ್ತುಬದ್ಧ ಜಾಮೀನು ಪಡೆದಿದ್ದರು. ಈ ಹಿಂದೆ ಬಿಜೆಪಿ ಮತ್ತು ಜೆಡಿಯು ಮೈತ್ರಿಕೂಟ ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದ ಗಿರಿರಾಜ್ ಸಿಂಗ್ ಅವರು ಪದೇ ಪದೇ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಮಾಧ್ಯಮಗಳಿಗೆ ಮತ್ತು ವಿರೋಧ ಪಕ್ಷಗಳಿಗೆ ಆಹಾರವಾಗುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.