ಈಗಿನ ಸುದ್ದಿ

ಕಾವೇರಿ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನ್ಯಾ.ಬಿ.ಎಸ್.ಚೌಹ್ವಾಣ್ ನೇಮಕ

ಕಾವೇರಿ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನ್ಯಾ.ಬಿ.ಎಸ್.ಚೌಹ್ವಾಣ್ ನೇಮಕ
Published On :

ನವದೆಹಲಿ: ಕಾವೇರಿ ಜಲವಿವಾದ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನ್ಯಾಯಮೂರ್ತಿ ಬಿ.ಎಸ್.ಚೌಹ್ವಾಣ್ ಅವರು ನೇಮಕವಾಗಿದ್ದಾರೆ.

ಹಾಲಿ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾಗಿರುವ ಬಿ.ಎಸ್.ಚೌಹ್ವಾಣ್ ಅವರನ್ನು ಕಾವೇರಿ ಜಲವಿವಾದ ನ್ಯಾಯಾಧಿಕರಣದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ನಡುವಿನ ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ನ್ಯಾಯಾಧಿಕರಣದ ಅಧ್ಯಕ್ಷ ಹುದ್ದೆ ಕಳೆದ 2 ವರ್ಷಗಳಿಂದ ಖಾಲಿಯಾಗಿ ಉಳಿದಿತ್ತು. ಇದೀಗ ಆ ಸ್ಥಾನಕ್ಕೆ ಕೇಂದ್ರ ಸರ್ಕಾರ ನ್ಯಾ.ಬಿ.ಎಸ್.ಚೌಹ್ವಾಣ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ನ್ಯಾಯಾಧಿಕರಣದ ಅಧ್ಯಕ್ಷರಾಗಿದ್ದ ನ್ಯಾ.ಎನ್.ಪಿ.ಸಿಂಗ್ ಅವರು 2 ವರ್ಷಗಳ ಹಿಂದೆ ಅನಾರೋಗ್ಯದ ಕಾರಣ ನೀಡಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪಿ.ಸದಾಶಿವಂ ಅವರು ಈ ಹಿಂದೆ ನ್ಯಾಯಾಧಿಕರಣದ ಅಧ್ಯಕ್ಷ ಸ್ಥಾನಕ್ಕೆ ಬಿ.ಎನ್.ಚೌಹ್ವಾಣ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು. ಆದರೆ ಈಗ ಸದಾಶಿವಂ ಅವರ ಶಿಫಾರಸ್ಸನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರ ಚೌಹ್ವಾಣ್ ಅವರನ್ನು ಕಾವೇರಿ ಜಲವಿವಾದ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನೇಮಕಾ ಮಾಡಿದೆ.

ಈ ಹಿಂದೆ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರಸರ್ಕಾರ ನ್ಯಾಯಾಧಿಕರಣವನ್ನು ರಚಿಸಿತ್ತು. 2007ರಲ್ಲಿ ಕಾವೇರಿ ಜಲವಿವಾದ ನ್ಯಾಯಾಧಿಕರಣ ತನ್ನ ಐ ತೀರ್ಪನ್ನು ಪ್ರಕಟಸಿತ್ತು. ಆದರೆ ನ್ಯಾಯಾಧಿಕರಣದ ಐತೀರ್ಪಿನ ಸ್ಫಷ್ಟತೆ ಕೋರಿ ಮೂರು ರಾಜ್ಯಗಳು ಅರ್ಜಿ ಸಲ್ಲಿಸಿದ್ದವು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.