ಈಗಿನ ಸುದ್ದಿ

ಪ್ರತಾಪ್ ಸಿಂಹಗೆ ಗೆಲವು, ತವರು ಜಿಲ್ಲೆಯಲ್ಲಿ ಸಿಎಂಗೆ ಮುಖಭಂಗ

ಪ್ರತಾಪ್ ಸಿಂಹಗೆ ಗೆಲವು, ತವರು ಜಿಲ್ಲೆಯಲ್ಲಿ ಸಿಎಂಗೆ ಮುಖಭಂಗ
Published On :

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಪತ್ರಕರ್ತ ಪ್ರತಾಪ್ ಸಿಂಹ್ ಅವರು ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಎಚ್.ವಿಶ್ವನಾಥ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ತವರು ಜಿಲ್ಲೆಯ ಸೋಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಮುಖಭಂಗವಾಗಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದರಿಂದ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಳ್ಳುವುದು ಅನಿವಾರ್ಯವಾಗಿತ್ತು. ಆದರೆ ಅವರು ಎಷ್ಟೇ ಪ್ರಯತ್ನ ಮಾಡಿದರೂ ಗೆಲುವು ತಮ್ಮದಾಗಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷ್ಣ್ಣರಾಜ, ಚಾಮರಾಜ, ನರಸಿಂಹರಾಜ, ಹುಣಸೂರು ಹಾಗೂ ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರೇ ಇದ್ದಾರೆ. ಚಾಮುಂಡೇಶ್ವರಿಯಲ್ಲಿ ಮಾತ್ರ ಜೆಡಿಎಸ್ ಶಾಸಕರಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಮಡಿಕೇರಿ ಮತ್ತು ವೀರಾಜಪೇಟೆಯಲ್ಲಿ ಬಿಜೆಪಿ ಶಾಸಕರಿದ್ದಾರೆ.

ಸ್ವತಃ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದು, ಐವರು ಶಾಸಕರಿರುವುದು ಮತ್ತು ಜಿಲ್ಲೆಯನ್ನು ಇಬ್ಬರು ಸಚಿವರು ಪ್ರತಿನಿಧಿಸುತ್ತಿರುವುದು, ಕಾಂಗ್ರೆಸ್‌ನಿಂದ ಹಿಂದುಳಿದ ಕುರುಬ ಜನಾಂಗಕ್ಕೆ ಸೇರಿದ ವಿಶ್ವನಾಥ್ ಅಭ್ಯರ್ಥಿ ಆಗಿರುವುದು, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಒಕ್ಕಲಿಗ ಜನಾಂಗಕ್ಕೆ ಸೇರಿದವರಾಗಿದ್ದರಿಂದ ಮತಗಳ ವಿಭಜನೆಯಾಗಿ ಕಾಂಗ್ರೆಸ್ ಗೆಲುವು ಸುಲಭ ಎಂದು ಎಣಿಸಲಾಗಿತ್ತು. ಆದರೆ ಕಾಂಗ್ರೆಸ್ ಒಂದು ಪ್ರಬಲ ವರ್ಗಧ ವಿರೋಧ, ಮೋದಿ ಅಲೆಯಲ್ಲಿ ಕೊಚ್ಚಿ ಹೋಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.