ಈಗಿನ ಸುದ್ದಿ

ಮೋದಿ ಎಫೆಕ್ಟ್: ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ

ಮೋದಿ ಎಫೆಕ್ಟ್: ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ
Published On :

ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ ಭಾರತೀಯ ಷೇರುಪೇಟೆಯಲ್ಲಿ ಮ್ಯಾಜಿಕ್ ಮಾಡಿದ್ದು, ಸೆನ್ಸೆಕ್ಸ್ ಸಾರ್ವಕಾಲಿಕ 1, 400 ಅಂಕಗಳ ದಾಖಲೆ ಏರಿಕೆ ಕಂಡಿದೆ.

ಲೋಕಸಭಾ ಚುನಾವಣಾ ಫಲಿತಾಂಶದ ಪರಿಣಾಮ ಷೇರುಮಾರುಕಟ್ಟೆ ಮೇಲೆ ಅಗಾಧ ಪರಿಣಾಮ ಬೀರಿದ್ದು, ನಿಫ್ಟಿಯಲ್ಲಿ 50 ಅಂಕಗಳ ಏರಿಕೆ ದಾಖಲಾಗಿದೆ. ಅಲ್ಲದೆ ರುಪಾಯಿ ಮೌಲ್ಯದಲ್ಲಿಯೂ ಏರಿಕೆ ಕಂಡುಬಂದಿದ್ದು, ಪ್ರತಿ ಡಾಲರ್‌ಗೆ 28.63ರಷ್ಟು ರುಪಾಯಿ ಮೌಲ್ಯ ಏರಿಕೆಯಾಗಿದೆ. ಮೂಲಗಳ ಪ್ರಕಾರ ಪ್ರಸಕ್ತ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸುಮಾರು 325ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವಿನ ಸನಿಹದಲ್ಲಿದ್ದಾರೆ.

ಆ ಮೂಲಕ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸ್ಥಿರಸರ್ಕಾರ ರಚನೆಯಾಗುವ ಎಲ್ಲ ಲಕ್ಷಣಗಳು ಗೋಚರವಾಗುತ್ತಿವೆ. ಹೀಗಾಗಿ ಷೇರುಮಾರುಕಟ್ಟೆಯಲ್ಲಿ ಇತಿ ಉತ್ಲಾಹದ ವಹಿವಾಟು ನಡೆಯುತ್ತಿದ್ದು, ಈ ಹಿಂದೆಂದಿಗಿಂತಲೂ ಇಂದು ಭಾರತೀಯ ಷೇರುಗಳಿಗೆ ಭಾರಿ ಬೇಡಿಕೆ ಕಂಡುಬಂದಿದೆ. ನೂತನ ಸರ್ಕಾರ ರಚನೆಯಾಗುವ ವೇಳೆಯವರೆಗೂ ಮಾರುಕಟ್ಟೆ ಇದೇ ಪರಿಸ್ಥಿತಿ ಮುಂದುವರೆಯುತ್ತದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಾರೆ ಸತತ 10 ವರ್ಷಗಳ ನಂತರ ಕೇಂದ್ರದಲ್ಲಿ ಮತ್ತೆ ಎನ್‌ಡಿಎ ಮೈತ್ರಿಕೂಟ ಅಧಿಕಾರದ ಗದ್ದುಗೆ ಏರಲಿದ್ದು, ಷೇರುಮಾರುಕಟ್ಟೆಯಲ್ಲಿ ಭಾರಿ ಉತ್ಸಾಹ ಮನೆ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.