ಈಗಿನ ಸುದ್ದಿ

ವಾರಣಸಿಯಲ್ಲಿ ಮೋದಿ ಮುನ್ನಡೆ, ಅಮೇಠಿಯಲ್ಲಿ ರಾಹುಲ್‌ಗೆ ಹಿನ್ನಡೆ

ವಾರಣಸಿಯಲ್ಲಿ ಮೋದಿ ಮುನ್ನಡೆ, ಅಮೇಠಿಯಲ್ಲಿ ರಾಹುಲ್‌ಗೆ ಹಿನ್ನಡೆ
Published On :

ನವದೆಹಲಿ: ಭಾರಿ ಕುತೂಹಲ ಹುಟ್ಟಿಸಿರುವ ವಾರಣಸಿಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಮುನ್ನಡೆ ಸಾಧಿಸುತ್ತಿದ್ದು, ಜಿದ್ದಾಜಿದ್ದಿಗೆ ಕಾರಣವಾಗಿರುವ ಅಮೇಠಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮೊದಲ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ಇನ್ನು ರಾಯ್‌ಬರೇಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ವಿದಿಶಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಷ್ಮಾ ಸ್ವರಾಜ್, ಅಮೃತ್‌ಸರದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಜೇಟ್ಲಿ ಮುನ್ನಡೆ, ನಾಂದೇಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಚವ್ಹಾಣ್ ಹಾಗೂ ಮೀರತ್ ಕೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ನಟಿ ನಗ್ಮಾ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ.

ತಮಿಳುನಾಡಿನಲ್ಲಿ ಎಐಎಡಿಎಂಕೆಗೆ ಭಾರಿ ಮುನ್ನಡೆ
ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಎಐಎಡಿಎಂಕೆ 39 ಕ್ಷೇತ್ರಗಳ ಪೈಕಿ 29 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಪ್ರತಿಪಕ್ಷ ಡಿಎಂಕೆ ಕೇವಲ 5 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.