ಈಗಿನ ಸುದ್ದಿ

ಸೋಲಿನ ನೈತಿಕ ಹೊಣೆ ಹೊತ್ತ ಸೋನಿಯಾ, ರಾಹುಲ್

ಸೋಲಿನ ನೈತಿಕ ಹೊಣೆ ಹೊತ್ತ ಸೋನಿಯಾ, ರಾಹುಲ್
Published On :

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸೋಲಿನ ನೈತಿಕ ಹೊಣೆ ಹೊತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ದೇಶದ ಜನತೆಯ ತೀರ್ಪಿಗೆ ತಲೆಬಾಗುತ್ತೇವೆ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಸೋನಿಯಾ, ರಾಹುಲ್ ಗಾಂಧಿ ಶುಭ ಹಾರೈಸಿದರು. ದೇಶದಾದ್ಯಂತ ಕಾಂಗ್ರೆಸ್‌ನ ಹೀನಾಯ ಸೋಲಿಗೆ ಕಾಂಗ್ರೆಸ್ ಅಧ್ಯಕ್ಷೆಯಾಗಿ ತಾನು ಸೋಲಿನ ಸಂಪೂರ್ಣ ನೈತಿಕ ಹೊಣೆಯನ್ನು ಹೊರುತ್ತೇನೆ ಎಂದು ಸೋನಿಯಾ ಹೇಳಿದರು.

ಪ್ರಸ್ತುತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೈದ್ಧಾಂತಿಕ ನೆಲೆಗಟ್ಟಿನ ಮೇಲೆ ಚುನಾವಣೆಯನ್ನು ಎದುರಿಸಿದ್ದೇವು. ಆದರೆ ಜನತೆ ನಮ್ಮ ವಿರುದ್ಧವಾಗಿ ಮತ ಚಲಾಯಿಸಿರುವುದಕ್ಕೆ ನಾನು ತಲೆಬಾಗುತ್ತೇನೆ ಎಂದರು.

ಏತನ್ಮಧ್ಯೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಾತನಾಡಿ, ಜನರ ತೀರ್ಪಿಗೆ ನಾನು ತಲೆಬಾಗುತ್ತೇನೆ. ಚುನಾವಣೆಯಲ್ಲಿ ಸೋಲು ಗೆಲುವು ಇದ್ದದ್ದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.