ಧರ್ಮ, ಜಾತಿಯನ್ನ ಮೀರಿ ಬೆಂಬಲಿಸಿದ ಜನರಿಗೆ ಅಭಿನಂದನೆ: ಬಿಜೆಪಿ

ನವದೆಹಲಿ: 2014ರ ಮಹತ್ತರ ಚುನಾವಣೆಯಲ್ಲಿ ಗೆಲುವಿನತ್ತ ಹೆಜ್ಜೆ ಹಾಕಿರುವ ಬಿಜೆಪಿ ದೇಶದ ಜನತೆಗೆ ಅಭಿನಂದನೆ ಸಲ್ಲಿಸಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಧರ್ಮ ಜಾತಿಯನ್ನ ಮೀರಿ ಜನರು ಬೆಂಬಲಿಸಿದ್ದು, ಇಡೀ ದೇಶದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಈ ಐತಿಹಾಸಿಕ ಗೆಲುವಿನ ಹಿಂದೆ ಮೋದಿಯ ಶ್ರಮವಿದೆ. ಈ ಗೆಲುವು ನರೇಂದ್ರ ಮೋದಿ ಜನಪ್ರಿಯತೆಯ ಪ್ರತೀಕ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ವಾಜಪೇಯಿ ಕನಸು ಇಂದು ನನಸಾಗಿದೆ. ಇಡೀ ದೇಶದಲ್ಲಿ ಕಮಲದ ಹೂವು ಅರಳಿದೆ. ಬಿಜೆಪಿ ಗೆಲುವಿಗಾಗಿ ದುಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಧನ್ಯವಾದ ಎಂದ ಅವರು ದೇಶದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ ಎಂದು ಹೇಳಿದ್ದಾರೆ.
ಭಾರತದ ಯಶಸ್ಸನ್ನು ಮರಳಿ ಬರೆಯುವ ಅವಕಾಶ ಬಂದಿದೆ. ಜನರು ನೀಡಿರುವ ಜವಾಬ್ದಾರಿಯ ಅರಿವು ನಮಗಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


