ಸೋಲಿನ ಹೊಣೆ ಹೊತ್ತು ಸಿದ್ದು ರಾಜಿನಾಮೆ ನೀಡಿಲಿ: ಬಿಜೆಪಿ

ಧಾರವಾಡ: ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಲಿ ಎಂದು ಪ್ರತಿಪಕ್ಷದ ನಾಯಕ ಜಗದೇಶ್ ಶೆಟ್ಟರ್ ಅವರು ಶುಕ್ರವಾರ ಹೇಳಿದ್ದಾರೆ.
ಫಲಿತಾಂಶದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಶೆಟ್ಟರ್, ನಿರೀಕ್ಷೆಯಂತೆ ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲವು ಕಂಡಿದೆ. ಆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಆಡಳಿತ ವೈಫಲ್ಯಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ. ಆಸ್ಸಾಂ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಗೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಪದತ್ಯಾಗ ಮಾಡಲಿ ಎಂದಿದ್ದಾರೆ.
ಮೋದಿ ಪ್ರಧಾನಿಯಾದರೆ ದೇಶ ತೊರೆಯುವುದಾಗಿ ಕೆಲವರು ಹೇಳಿಕೆ ನೀಡಿದ್ದರು. ಈಗೇನು ಮಾಡಬೇಕು ಎಂಬುದು ಅವರ ವಿವೇಚನೆಗೆ ಬಿಟ್ಟಿದ್ದು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಡೆದು ಹೋಗಿದ್ದ ಬಿಜೆಪಿ ಈ ಸಲ ಒಗ್ಗಟ್ಟಾಗಿ ಎಲ್ಲರ ಬಳಿ ಹೋಗಿದ್ದರ ಫಲಿತಾಂಶ ಇದು. ರಾಜ್ಯದಲ್ಲಿ ಮೋದಿ ಅಲೆ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಮೇಶ್ವರ ಹೇಳಿದ್ದರು. ಇದು ಅಲೆಯಲ್ಲ ಸುನಾಮಿ. ಯುಪಿಎ ಸರ್ಕಾರದ ವೈಫಲ್ಯ, ಕಾಂಗ್ರೆಸ್ ಬಗ್ಗೆ ಇದ್ದ ಆಕ್ರೋಶ ಹಾಗೂ ಮೋದಿ ಅಲೆಯ ಪರಿಣಾಮ ಬಿಜೆಪಿ ಜಯಭೇರಿ ಬಾರಿಸಿದೆ ಎಂದು ಶೆಟ್ಟರ್ ಹೇಳಿದರು.
ಕಾಂಗ್ರೆಸ್ಗೆ ತಕ್ಕ ಉತ್ತರ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡು ಅಪಹಾಸ್ಯ ಮಾಡಿದ್ದ ಕಾಂಗ್ರೆಸಿಗರಿಗೆ ಈ ಚುನಾವಣೆ ತಕ್ಕ ಉತ್ತರ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.
ಧಾರವಾಡದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ತಮ್ಮ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗಳಿಸಿದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು
ಧಾರವಾಡ ಕ್ಷೇತ್ರದಲ್ಲಿ 10 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಸಾಧನೆ, ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು ಹಾಗೂ ಮೋದಿ ಅಲೆ ನನ್ನ ಗೆಲುವಿಗೆ ಕಾರಣ. ಕೆಲವರು ನನ್ನ ವಿರುದ್ಧ ಅಪಪ್ರಚಾರ ಮಾಡಿದರೂ ಕ್ಷೇತ್ರದ ಜನತೆ ನನ್ನನ್ನು ಆಶೀರ್ವದಿಸಿದ್ದಾರೆ. ಜನರಿಟ್ಟ ವಿಶ್ವಾಸಕ್ಕೆ ಚ್ಯುತಿ ತರುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


