ಈಗಿನ ಸುದ್ದಿ

ಇದು ಬಿಜೆಪಿ ಕಾರ್ಯಕರ್ತರ ಶ್ರಮಕ್ಕೆ ಸಂದ ಜಯ: ಮೋದಿ

ಇದು ಬಿಜೆಪಿ ಕಾರ್ಯಕರ್ತರ ಶ್ರಮಕ್ಕೆ ಸಂದ ಜಯ: ಮೋದಿ
Published On :

ನವದೆಹಲಿ: ಇದು ಬಿಜೆಪಿ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಜಯ ಎಂದು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ವಿಜಯೋತ್ಸವ ರ್ಯಾಲಿಯ ಬಳಿಕ ದೆಹಲಿಯ ಬಿಜೆಪಿ ಕಚೇರಿಯಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ದೆಹಲಿಯ ಎಲ್ಲಾ 7 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿದ್ದಕ್ಕೆ ಧನ್ಯವಾದ ಮತ್ತು ನನಗೆ ಭರ್ಜರಿ ಸ್ವಾಗತ ನೀಡಿದ್ದಕ್ಕೆ ಆಭಾರಿಯಾಗಿದ್ದೇನೆ ಎಂದರು.

ಇದಕ್ಕು ಮುನ್ನ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಚ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿಗೆ ಬಿಜೆಪಿ ನಾಯಕರು ಹಾಗೂ ಕಾರ್ಯತಕರ್ತರು ಭರ್ಜರಿ ಸ್ವಾಗತ ನೀಡಿದರು. ಅಲ್ಲಿಂದ ರ್ಯಾಲಿಯ ಮೂಲಕ ಮೋದಿಯನ್ನು ಅಶೋಕ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಕರೆತರಲಾಯಿತು.

ಸಂಸದೀಯ ಮಂಡಳಿ ಸಭೆ
ನರೇಂದ್ರ ಮೋದಿ ಅವರ ಮೆರವಣಿಗೆ ಮುಕ್ತಾಯವಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಮೋದಲಿಗೆ ಮೋದಿ ಅವರನ್ನು ಪ್ರಧಾನಿ ಅಧಿಕೃತವಾಗಿ ಆಯ್ಕೆ ಮಾಡಲಾಗುತ್ತದೆ. ಬಳಿಕ ಪ್ರಮಾಣವಚನ ಸ್ವೀಕರಿಸುವ ದಿನಾಂಕದ ಬಗ್ಗೆ ಹಾಗೂ ಅವರ ಸಚಿವ ಸಂಪುಟ ಹೇಗಿರಬೇಕು ಎಂಬುದರ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಲ್ಲದೆ ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಸಿ ಹಾಗೂ ಸುಷ್ಮಾ ಸ್ವರಾಜ್ ಅವರಿಗೆ ಯಾವ ಸ್ಥಾನಮಾನ ನೀಡಬೇಕು ಎಂಬುದರ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.