ಹೀನಾಯ ಸೋಲು: ಸೋನಿಯಾ, ರಾಹುಲ್ ರಾಜಿನಾಮೆ ಸಾಧ್ಯತೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ.
ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜಿನಾಮೆ ನೀಡುವ ಸಾಧ್ಯತೆ ಇದೆ. ಸೋಮವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಈ ವೇಳೆ ಸೋನಿಯಾ ಹಾಗೂ ರಾಹುಲ್ ಗಾಂಧಿ ರಾಜಿನಾಮೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಆಡಳಿತ ವಿರೋಧಿ ಅಲೆಯಿಂದ ತತ್ತರಿಸಿದ್ದ ಕಾಂಗ್ರೆಸ್‌ಗೆ ಇಷ್ಟೊಂದು ಹೀನಾಯ ಸೋಲು ಬರಬಹುದೆಂಬ ನಿರೀಕ್ಷೆ ಇರಲಿಲ್ಲ. ಎಲ್ಲಾ ಮಾಧ್ಯಮ ಸಮೀಕ್ಷೆಗಳು ಭವಿಷ್ಯ ನುಡಿದಂತೆ ನೂರರ ಆಜುಬಾಜಿನಲ್ಲಿ ತಮ್ಮ ನೆಲೆ ಕಂಡುಕೊಳ್ಳಬಹುದೆಂಬ ಲೆಕ್ಕಾಚಾರ ಕಾಂಗ್ರೆಸ್ ನಾಯಕರದ್ದಾಗಿತ್ತು. ಆಡಳಿತ ವಿರೋಧಿ ಅಲೆಯನ್ನೂ ಮೀರಿ ಸ್ಥಿತಿ ಸುಧಾರಿಸಿಕೊಳ್ಳುವ ಪ್ರಯತ್ನ ಕಾಂಗ್ರೆಸ್‌ನಿಂದ ಆಗಲೇ ಇಲ್ಲ.
ರಾಹುಲ್ ಗಾಂಧಿ ಅವರ ಅನನುಭವ, ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಹುಲ್ ಕಾರ್ಯವೈಖರಿ, ವ್ಯವಸ್ಥಿತ ರೀತಿಯಲ್ಲಿ ಪ್ರಚಾರ, ಸಭೆ, ಸಮಾರಂಭ ನಡೆಸಲು ವಿಫಲವಾದದ್ದು, ಎಐಸಿಸಿ ಏರಿಗೆ ಎಳೆದರೆ, ಪಿಸಿಸಿಗಳು ನೀರಿಗೆ ಎಳೆದಂತೆ ಸಮನ್ವಯದ ಕೊರತೆ ಕೊನೆ ಕ್ಷಣದಲ್ಲೂ ಇತ್ತು. ಹೀಗಾಗಿಯೇ ಅತಿದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲೇ ತನ್ನ ನೆಲೆ ಕಳೆದುಕೊಂಡಿದೆ. ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ಮುಂಚೂಣಿಯಲ್ಲಿಟ್ಟಿದ್ದರಿಂದ ಜನತೆಗೂ ಆಯ್ಕೆಗೆ ಅವಕಾಶ ಸಿಕ್ಕಿತು. ಅನನುಭವಿ ರಾಹುಲ್ ಗಾಂಧಿ ಮತ್ತು ಅನುಭವಿ ನರೇಂದ್ರ ಮೋದಿ. ಇಬ್ಬರಲ್ಲಿ ಅನುಭವಿಯನ್ನೇ ಜನತೆ ಆಯ್ಕೆ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


