ಲೋಕಸಭಾ ಚುನಾವಣೆ ಸೋಲು: ಮನೆ ಖಾಲಿ ಮಾಡಿದ ರಮ್ಯಾ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ನಟಿ ರಮ್ಯಾ ಅವರು ಮಂಡ್ಯದಲ್ಲಿರುವ ತಮ್ಮ ಮನೆಯನ್ನು ಖಾಲಿ ಮಾಡಿದ್ದಾರೆ.
ಮಂಡ್ಯದ ವಿದ್ಯಾನಗರದಲ್ಲಿರುವ ಬಾಡಿಗೆ ಮನೆಯಲ್ಲಿ ಮಾಜಿ ಸಂಸದೆ ರಮ್ಯಾ ಅವರು ವಾಸವಾಗಿದ್ದರು. ಆದರೆ ಇಂದು ರಮ್ಯಾ ಅವರು ತಮ್ಮ ಮನೆಯಲ್ಲಿದ್ದ ವಸ್ತುಗಳನ್ನು ಬೇರೆಡೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ. ನಟಿ ರಮ್ಯಾ ಅವರು ಮನೆ ಖಾಲಿ ಮಾಡಿರುವ ವಿಚಾರವನ್ನು ಮನೆ ಮಾಲೀಕ ಸಾದತ್ ಅಲಿಖಾನ್ ಅವರು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಮ್ಯಾ ಅವರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಅವರು ಎರಡನೇ ಸ್ಥಾನಕ್ಕೆ ಕುಸಿದಿದ್ದು, ಚುನಾವಣೆಯಲ್ಲಿ ಸೋಲು ಕಾಣುವ ಮೂಲಕ ತೀವ್ರ ಮುಖಭಂಗವನ್ನು ಅನುಭವಿಸಿದ್ದಾರೆ. ರಮ್ಯಾ ಅವರ ಸೋಲಿಗೆ ಮಂಡ್ಯ ಕಾಂಗ್ರೆಸ್ ಬಣ ರಾಜಕೀಯವೇ ಕಾರಣ ಎನ್ನಲಾಗುತ್ತಿದೆ. ಮಂಡ್ಯದಲ್ಲಿ ಅಂಬರೀಶ್ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಅವರ ಬೆಂಬಲಿಗರ ನಡುವೆ ತೀವ್ರ ಭಿನ್ನಾಭಿಪ್ರಾಯಗಳಿವೆ.
ಇದು ಕಳೆದ ಲೋಕಸಭಾ ಉಪ ಚುನಾವಣಾ ಪ್ರಚಾರದಲ್ಲಿಯೇ ಪ್ರತಿಬಿಂಬಿಸಿತ್ತು. ಆದರೆ ರಾಜ್ಯ ನಾಯಕರೆಲ್ಲರೂ ಒಗ್ಗೂಡಿ ಶ್ರಮಿಸಿದ್ದರಿಂದ ರಮ್ಯಾ ಅವರು ಗೆಲುವು ಸಾಧಿಸಿದ್ದರು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಅವರಿಗೆ ರಾಜ್ಯ ನಾಯಕರ ಪ್ರಚಾರದ ಕೊರತೆ ಎದುರಾಗಿದ್ದೇ ಅವರ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.
ಈ ಹಿಂದೆ ತಾವು ಸೋತರೂ ಗೆದ್ದರೂ ಮಂಡ್ಯ ಜಿಲ್ಲೆಯಲ್ಲಿಯೇ ವಾಸ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದ ನಟಿ ರಮ್ಯಾ ಅವರು, ಇದೀಗ ತಮ್ಮ ಮನೆಯನ್ನು ಖಾಲಿ ಮಾಡಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ರಮ್ಯಾ ಅವರು ರಾಜಕೀಯ ತೊರೆಯುವ ನಿರ್ಧಾರದಿಂದಾಗಿ ಮಂಡ್ಯ ಜಿಲ್ಲೆಯನ್ನು ತೊರೆದಿರಬಹುದು ಎಂದು ಊಹಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


