ಈಗಿನ ಸುದ್ದಿ

ಸಿಎಂ ಸ್ಥಾನಕ್ಕೆ ನಿತೀಶ್ ರಾಜಿನಾಮೆ ಅಂತಿಮ: ಶರದ್ ಯಾದವ್

ಸಿಎಂ ಸ್ಥಾನಕ್ಕೆ ನಿತೀಶ್ ರಾಜಿನಾಮೆ ಅಂತಿಮ: ಶರದ್ ಯಾದವ್
Published On :

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸ್ಥಾನವನ್ನು ತೊರೆಯುವುದು ಅಂತಿಮವಾಗಿದೆ ಎಂದು ಜೆಡಿಯು ಅಧ್ಯಕ್ಷ ಶರದ್‌ಯಾದವ್ ಸೋಮವಾರ ತಿಳಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜಿನಾಮೆ ಹಿನ್ನೆಲೆಯಲ್ಲಿ ಪಾಟ್ನಾದಲ್ಲಿ ಜೆಡಿಯು ಶಾಸಕರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತೀಶ್ ಕುಮಾರ್ ಹುದ್ದೆ ಬಿಡುವುದು ಅಂತಿಮವಾಗಿದೆ. ಪಕ್ಷ ಮತ್ತು ರಾಷ್ಟ್ರದ ಹಿತಕ್ಕಾಗಿ ನಿತೀಶ್ ಕುಮಾರ್ ಅವರು ರಾಜಿನಾಮೆ ನೀಡುವಂತಹ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇದು ತುಂಬಾ ಕಷ್ಟಕರ ಮತ್ತು ನೋವಿನ ನಿರ್ಧಾರವಾದರೂ ಅಂತಿಮ ಹಾಗೂ ಇದೇ ಸರಿಯಾದ ನಿರ್ಧಾರವಾಗಿದೆ ಎಂದು ಶರದ್ ಯಾದವ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಜೆಡಿಯು ಹೀನಾಯವಾಗಿ ಸೋಲನ್ನಪ್ಪಿತ್ತು. 40 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಯು ಕೇವಲ 2 ಸ್ಥಾನಗಳನ್ನು ಗೆದ್ದಿತ್ತು. ಈ ಸೋಲಿನ ನೈತಿಕ ಹೊಣೆ ಹೊತ್ತು ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ತಿಳಿಸಿದ್ದರು.

ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜಿನಾಮೆ ಹಿನ್ನೆಲೆಯಲ್ಲಿ ಬಿಹಾರದ ಪಾಟ್ನಾದಲ್ಲಿ ಜೆಡಿಯು ಶಾಸಕರ ಸಭೆ ಆರಂಭಗೊಂಡಿದ್ದು, ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ನೇಮಿಸಬೇಕು ಎಂಬುದು ಸಭೆಯಲ್ಲಿ ತೀರ್ಮಾನವಾಗಲಿದೆ. ಸದ್ಯ ಸಿಎಂ ಸ್ಥಾನಕ್ಕೆ ಆರ್‌ಸಿಪಿ ಸಿಂಗ್ ಅವರ ಹೆಸರು ಕೇಳಿಬರುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.