ಈಗಿನ ಸುದ್ದಿ

ಸೋನಿಯಾ, ರಾಹುಲ್ ರಾಜಿನಾಮೆ ಇಲ್ಲ

ಸೋನಿಯಾ, ರಾಹುಲ್ ರಾಜಿನಾಮೆ ಇಲ್ಲ
Published On :

ನವದೆಹಲಿ: ಕಾಂಗ್ರೆಸ್‌ನ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜಿನಾಮೆಗೆ ಮುಂದಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜಿನಾಮೆಯನ್ನು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ತಿರಸ್ಕಿರಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಎರಡಂಕ್ಕಿ ದಾಟದ ಕಾಂಗ್ರೆಸ್ ಬಿಜೆಪಿ ವಿರುದ್ಧ ಹೀನಾಯ ಸೋಲು ಕಂಡಿತ್ತು. ಈ ಹಿನ್ನೆಲೆಯಲ್ಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಲಿನ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲು ಮುಂದಾಗಿದ್ದರು.

ಈ ಹಿನ್ನೆಲೆಯಲ್ಲಿ ಇಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರ ರಾಜಿನಾಮೆಯನ್ನು ಸಮಿತಿ ಸರ್ವಾನುಮತದಿಂದ ತಿರಸ್ಕರಿಸಿದೆ ಎಂದು ಸಂಸದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯ ನಾಯಕತ್ವದಲ್ಲಿ ನಮಗೆ ನಂಬಿಕೆ ಇದೆ. ಹೀಗಾಗಿ ಅವರ ನಾಯಕತ್ವದಲ್ಲೇ ಪಕ್ಷವನ್ನು ಮತ್ತಷ್ಟು ಸಮರ್ಥವಾಗಿ ಕಟ್ಟಿ ಬೆಳಸಲಾಗುವುದು ಎಂದರು.

ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ 543 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಕೇವಲ 44 ಸ್ಥಾನಗಳನ್ನು ಗೆಲ್ಲುವುದರ ಮೂಲಕ ಹೀನಾಯ ಸೋಲು ಕಂಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.