ಈಗಿನ ಸುದ್ದಿ

ಕಾಶ್ಮೀರದಲ್ಲಿ ಕಣಿವೆಗೆ ಉರುಳಿದ ಬಸ್: 17 ಜನರ ಸಾವು

ಕಾಶ್ಮೀರದಲ್ಲಿ ಕಣಿವೆಗೆ ಉರುಳಿದ ಬಸ್: 17 ಜನರ ಸಾವು
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಬಸ್ಸೋಂದು ಕಣಿವೆಗೆ ಬಿದ್ದ ಪರಿಣಾಮ 17 ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದಾರೆ.

ಜಮ್ಮುವಿನಿಂದ ಶ್ರೀನಗರಕ್ಕೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಂಜಾನೆ 3 ಗಂಟೆಯ ಸಮಯದಲ್ಲಿ ರಾಮ್‌ಬನ್ ಜಿಲ್ಲೆಯಲ್ಲಿ 400 ಅಡಿ ಆಳದ ಕಣಿವೆಗೆ ಉರುಳಿ ಬಿದ್ದಿದೆ. ಈ ದುರಂತದಲ್ಲಿ 6 ಮಹಿಳೆಯರು ಹಾಗೂ ಒಂದು ಮಗು ಸೇರಿ 17 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 27 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸೇನೆ, ಪೊಲೀಸರು, ಸಿಆರ್‌ಪಿಎಫ್ ಯೋಧರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಪಘಾತಕ್ಕೆ ಚಾಲಕನ ಅಜಾಗರೂಕತೆ ಕಾರಣ. ಅಪಘಾತ ಎಷ್ಟು ಭೀಕರವಾಗಿತ್ತು ಎಂದರೆ ರಭಸಕ್ಕೆ ಕೆಲ ಮೃತದೇಹಗಳನ್ನು ಗುರುತು ಹಿಡಿಯದಷ್ಟು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಸ್‌ನಲ್ಲಿ ಪ್ರವಾಸಿಗರು ಹಾಗೂ ಪೂಂಚ್‌ನಿಂದ ಕೆಲವು ವಿದ್ಯಾರ್ಥಿಗಳು ಕಾಶ್ಮೀರಕ್ಕೆ ತೆರಳುತ್ತಿದ್ದರು. ಇದಲ್ಲದೆ ಗುಜರಾತ್ ಮತ್ತು ಪಂಜಾಬ್ ರಾಜ್ಯಕ್ಕೆ ಸೇರಿದ ಕೆಲವು ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.