ಈಗಿನ ಸುದ್ದಿ

ಜನತೆಯ ಕ್ಷಮೆಯಾಚಿಸಿದ ಕೇಜ್ರಿವಾಲ್

ಜನತೆಯ ಕ್ಷಮೆಯಾಚಿಸಿದ ಕೇಜ್ರಿವಾಲ್
Published On :

ನವದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ತಮ್ಮ ಆತುರದ ನಿರ್ಧಾರದ ಬಗ್ಗೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಜನತೆಯ ಕ್ಷಮೆಯಾಚಿಸಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ಆಪ್ ಶಾಸಕರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ತಾವು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬಾರದಿತ್ತು. ಈ ಬಗ್ಗೆ ದೆಹಲಿ ಜನತೆಯಲ್ಲಿ ಅಸಮಾಧಾನ ಇದೆ. ಹೀಗಾಗಿ ತಾವು ದೆಹಲಿ ಹಾಗೂ ದೇಶದ ಜನತೆಯಲ್ಲಿ ಕ್ಷಮೆ ಕೋರುವುದಾಗಿ ಹೇಳಿದರು.

ಕಾಂಗ್ರೆಸ್ ಬೆಂಬಲದೊಂದಿಗೆ ದೆಹಲಿಯಲ್ಲಿ ನಾವು ಮತ್ತೆ ಸರ್ಕಾರ ರಚಿಸುವ ಪ್ರಯತ್ನ ಮಾಡುವುದಿಲ್ಲ. ಹೊಸದಾಗಿ ಚುನಾವಣೆ ಎದುರಿಸಲು ನಮ್ಮ ಪಕ್ಷ ಸಿದ್ಧವಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಮತ್ತೆ ಸರ್ಕಾರ ರಚಿಸುವ ಸಂಬಂಧ ನಿನ್ನೆಯಷ್ಟೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿ ಮಾಡಿದ್ದ ಕೇಜ್ರಿವಾಲ್ ಅವರು, ತಾವು ಜನಾಭಿಪ್ರಾಯ ಸಂಗ್ರಹಿಸುವವರೆಗೆ ವಿಧಾಸಭೆಯನ್ನು ವಿಸರ್ಜಿಸಬೇಡಿ ಎಂದು ಮನವಿ ಮಾಡಿದ್ದರು. ಆದರೆ ಕಾಂಗ್ರೆಸ್ ಬೆಂಬಲ ನೀಡುವುದಿಲ್ಲ ಎಂದು ಬಹಿರಂಗವಾಗಿಯೇ ಹೇಳಿದ್ದರಿಂದ ಕೇಜ್ರಿವಾಲ್ ಮತ್ತೆ ಸಿಎಂ ಆಗುವ ಕನಸು ಭಗ್ನವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.