ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪಾಕ್ ಪ್ರಧಾನಿಗೆ ಆಹ್ವಾನ

ನವದೆಹಲಿ: ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಾಕಿಸ್ತಾನ ಸೇರಿದಂತೆ ಸಾರ್ಕ್ ರಾಷ್ಟ್ರಗಳ ನಾಯಕರಿಗೆ ಆಹ್ವಾನ ನೀಡಿದ್ದಾರೆ.
ಮೇ 26ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರಿಗೂ ಸಹ ಆಹ್ವಾನ ನೀಡಲಾಗಿದೆ.
26ರಂದು ಮೋದಿ ಅವರೊಂದಿಗೆ ಇನ್ನು ಕೆಲವು ನಾಯಕರು ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದ್ದು, ಅರುಣ್ ಜೇಟ್ಲಿ ಅಥವಾ ಅರುಣ್ ಶೌರಿಗೆ ಹಣಕಾಸು, ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಗೃಹ ಖಾತೆ, ರವಿಶಂಕರ್ ಪ್ರಸಾದ್ ಅವರಿಗೆ ಕಾನೂನು, ದೆಹಲಿ ನಾಯಕ ವರ್ಷವರ್ಧನ್‌ಗೆ ಆರೋಗ್ಯ ಖಾತೆ ಹಾಗೂ ಸುಷ್ಮಾ ಸ್ವರಾಜ್ ಅವರಿಗೆ ಮಾನವ ಸಂಪನ್ಮೂಲ ಅಥವಾ ರಕ್ಷಣಾ ಖಾತೆ ದೊರೆಯುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


