ಈಗಿನ ಸುದ್ದಿ

ಮಾನಹಾನಿ ಪ್ರಕರಣ: ಕೇಜ್ರಿವಾಲ್‌ಗೆ ನ್ಯಾಯಾಂಗ ಬಂಧನ

ಮಾನಹಾನಿ ಪ್ರಕರಣ: ಕೇಜ್ರಿವಾಲ್‌ಗೆ ನ್ಯಾಯಾಂಗ ಬಂಧನ
Published On :

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಮುಖಂಡ ನಿತಿನ್ ಗಡ್ಕರಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಕೇಜ್ರಿವಾಲ್‌ಗೆ ದೆಹಲಿ ಕೋರ್ಟ್ ಮೇ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲ ಹೌಸ್ ಕೋರ್ಟ್, ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಪಡೆಯಲು 10 ಸಾವಿರ ರು. ಬಾಂಡ್ ನೀಡುವಂತೆ ಸೂಚಿಸಿತ್ತು. ಆದರೆ ಇದನ್ನು ನಿರಾಕರಿಸಿದ ಕೇಜ್ರಿವಾಲ್‌ಗೆ 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ.

ಆಪ್ ಮುಖ್ಯಸ್ಥ ಹಾಗು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭ್ರಷ್ಟರ ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದರು. ಆ ಪಟ್ಟಿಯಲ್ಲಿ ಬಿಜೆಪಿ ಮುಖಂಡ ನಿತಿನ್ ಗಡ್ಕರಿ ಹೆಸರು ಇದದ್ದರಿಂದ ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಜಾಮೀನಿಗೆ ಅರ್ಜಿ ಸಲ್ಲಿಸಲ್ಲ: ಕೇಜ್ರಿವಾಲ್
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆಯಲು 10 ಸಾವಿರ ರು. ಬಾಂಡ್ ನೀಡುವಂತೆ ಕೋರ್ಟ್ ಸೂಚಿಸಿತ್ತು. ಆದರೆ ಇದನ್ನು ನಿರಾಕರಿಸಿದ ಕೇಜ್ರಿವಾಲ್ ನಾನು ತಪ್ಪು ಮಾಡಿಲ್ಲ. ಕೇವಲ ಭ್ರಷ್ಟಚಾರದ ವಿರುದ್ಧ ಹೋರಾಡಿದ್ದೇ ಹೀಗಾಗಿ ನಾನು ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ ಎಂದು ತನ್ನ ಉದ್ಧಟತನ ಮೊರೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.