ಈಗಿನ ಸುದ್ದಿ

ಮೋದಿ ಪ್ರತಿಜ್ಞಾವಿಧಿಗೆ ಜಯಾ, ವೈಕೋ ಗೈರು?

ಮೋದಿ ಪ್ರತಿಜ್ಞಾವಿಧಿಗೆ ಜಯಾ, ವೈಕೋ ಗೈರು?
Published On :

ಚೆನ್ನೈ: ನಿಯೋಜಿತ ಪ್ರಧಾನಮಂತ್ರಿ ನರೇಂದ್ರ ಮೋದಿಯ ಪ್ರತಿಜ್ಞಾವಿಧಿಗೆ ನೆರೆಯ ರಾಷ್ಟ್ರ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಾಪಕ್ಷೆ ಅವರನ್ನು ಆಹ್ವಾನಿಸಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಹಾಗೂ ಎಂಡಿಎಂಕೆ ಮುಖ್ಯಸ್ಥ ವೈಕೋ ಅವರು ಆಕ್ಷೇಪಿಸಿದ್ದಾರೆ.

ಮೇ 26ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇದಕ್ಕಾಗಿ ನೆರೆಯ ರಾಷ್ಟ್ರದ ಅಧ್ಯಕ್ಷರನ್ನು ಆಹ್ವಾನಿಸಲಾಗಿದ್ದು, ಇದರಲ್ಲಿ ಶ್ರೀಲಂಕಾ ಅಧ್ಯಕ್ಷ ಮಹಿಂದಾ ಅವರು ಸೇರಿರುವುದರಿಂದ ಇದಕ್ಕೆ ಬೇಸರ ವ್ಯಕ್ತಪಡಿಸಿರುವ ಜಯಲಲಿತಾ, ಎಂಡಿಎಂಕೆ ನಾಯಕ ವೈಕೋ ಮೋದಿ ಪ್ರತಿಜ್ಞಾವಿಧಿಗೆ ಗೈರಾಗಲಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ ಪ್ರತಿಜ್ಞಾವಿಧಿಗೆ ಶ್ರೀಲಂಕಾ ಅಧ್ಯಕ್ಷ ಮಹಿಂದಾ ಅವರು ಬರುತ್ತಿರುವುದು ತಮಿಳುನಾಡಿನ ಜನತೆಯ ಭಾವನೆಗಳಿಗೆ ನೋವುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಜಯಲಲಿತಾ ಸಮಾರಂಭಕ್ಕೆ ಗೈರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಲಂಕಾದಲ್ಲಿ ತಮಿಳರ ಅಸ್ಥಿರತೆ ಕುರಿತು ಧ್ವನಿ ಎತ್ತಿರುವ ಜಯಲಲಿತಾ ಪ್ರತಿಜ್ಞಾವಿಧಿಗೆ ಶ್ರೀಲಂಕಾ ಅಧ್ಯಕ್ಷರನ್ನು ಬಿಜೆಪಿ ಆಹ್ವಾನಿಸಿರುವುದಕ್ಕೆ ಬೇಸರಗೊಂಡಿದ್ದಾರೆ.

ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ ಸೇರಿದಂತೆ ಸಾರ್ಕ್ ರಾಷ್ಟ್ರಗಳ ನಾಯಕರಿಗೆ ನಿನ್ನೆ ಆಹ್ವಾನ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.