ಗುಜರಾತ್ನ ಮೊದಲ ಮಹಿಳಾ ಸಿಎಂ ಆಗಿ ಆನಂದಿಬೆನ್ ಪ್ರಮಾಣ ಸ್ವೀಕಾರ

ಗಾಂಧಿನಗರ: ಗುಜರಾತ್ನ ನೂತನ ಮುಖ್ಯಮಂತ್ರಿಯಾಗಿ ಹಾಲಿ ಕಂದಾಯ ಸಚಿವೆ ಆನಂದಿಬೆನ್ ಪಟೇಲರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಗಾಂಧಿನಗರದ ಗಾಂಧಿಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲೆ ಕಮಲಾ ಬೇನಿವಾಲ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದು, ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಆಡ್ವಾಣಿ ಅವರ ಸಮ್ಮುಖದಲ್ಲಿ 'ಈಶ್ವರ' ದೇವರ ಹೆಸರಲ್ಲಿ ಗುಜರಾತ್ನ ಮೊದಲ ಮಹಿಳಾ ಸಿಎಂ ಆಗಿ ಆನಂದಿಬೆನ್ ಪಟೇಲ್ರು ಪ್ರಮಾಣವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿ ಹಿರಿಯ ಮುಖಂಡರಾದ ನಿತಿನ್ ಗಡ್ಕರಿ, ಸುಷ್ಮಾಸ್ವರಾಜ್, ಮುರಳಿ ಮನೋಹರ್ ಜೋಷಿ, ವೆಂಕಯ್ಯನಾಯ್ಡು ಸೇರಿದಂತೆ ರಾಜ್ಯ ಬಿಜೆಪಿ ಮುಖಂಡರು ಹಾಗು ಶಾಸಕರು ಉಪಸ್ಥಿತರಿದ್ದರು.
ನಿಯೋಜಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಮೋದಿ ರಾಜಿನಾಮೆಯಿಂದಾಗಿ ತೆರವುಗೊಂಡಿದ್ದ ಸಿಎಂ ಸ್ಥಾನಕ್ಕೆ ಆನಂದಿಬೆನ್ ಪಟೇಲ್ ಹೆಸರು ಕೇಳಿಬಂದಿತ್ತು. ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅಮಿತ್ ಶಾ ಅವರು ಹೆಸರನ್ನು ಪ್ರಸ್ತಾಪಿಸಿದರು.
ಸಭೆಯಲ್ಲಿ ಗುಜರಾತ್ನ ಬಿಜೆಪಿ ಶಾಸಕರು ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನಾಯಕಿಯಾಗಿ ಆನಂದಿಬೆನ್ರನ್ನು ಆಯ್ಕೆ ಮಾಡಿದ್ದರು. ಹೀಗಾಗಿ ಗುಜರಾತ್ನ ಪ್ರಥಮ ಮಹಿಳಾ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


