ಈಗಿನ ಸುದ್ದಿ

ಮೋದಿ ಪ್ರಮಾಣ ವಚನಕ್ಕೆ ಶ್ರೀಲಂಕಾ ಪ್ರಧಾನಿ: ಡಿಎಂಕೆ ವಿರೋಧ

ಮೋದಿ ಪ್ರಮಾಣ ವಚನಕ್ಕೆ ಶ್ರೀಲಂಕಾ ಪ್ರಧಾನಿ: ಡಿಎಂಕೆ ವಿರೋಧ
Published On :

ನವದೆಹಲಿ: ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸೆ ಅವರನ್ನು ಆಹ್ವಾನಿಸಿರುವ ಕೇಂದ್ರದ ಕ್ರಮಕ್ಕೆ ಡಿಎಂಕೆ ಮುಖಸ್ಥ ಎಂ.ಕರುಣಾನಿಧಿ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದೇ ಮೇ 26ಕ್ಕೆ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಅಮೇರಿಕ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ಸೇರಿದಂತೆ ವಿವಿಧ ದೇಶಗಳ ಅಧ್ಯಕ್ಷರಿಗೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಆದರೆ ಸಮಾರಂಭಕ್ಕೆ ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸೆ ಅವರನ್ನು ಆಹ್ವಾನಿಸಿದ ಕೇಂದ್ರದ ಕ್ರಮಕ್ಕೆ ಡಿಎಂಕೆ ಪಕ್ಷದ ಮುಖ್ಯಸ್ಥ ಕರುಣಾನಿಧಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

'ರಾಜಪಕ್ಸೆ ಸಾರ್ಕ್‌ನ ಸದಸ್ಯರಾಗಿದ್ದು, ಇದೇ ಕಾರಣಕ್ಕಾಗಿ ಬಿಜೆಪಿ ಅವರಿಗೆ ಆಹ್ವಾನ ನೀಡಿದೆ. ಆದರೆ ತಮಿಳರ ಭಾವನೆಯನ್ನು ಕೂಡ ಅವರು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಿರ್ಧಾರದಿಂದ ತಮಿಳುನಾಡಿನ ಜನತೆಯಲ್ಲಿ ತೀವ್ರ ಅಸಮಾಧಾನವಿದೆ. ಶ್ರೀಲಂಕಾದಲ್ಲಿ ತಮಿಳರ ಮೇಲೆ ಅಲ್ಲಿನ ಸರ್ಕಾರ ನಿರಂತರ ದಾಳಿ ಮಾಡುತ್ತಿದ್ದು, ಮಾನವ ಹಕ್ಕುಗಳನ್ನು ಉಲ್ಲಂಘಿಸಿದೆ. ಹೀಗಾಗಿ ಶ್ರೀಲಂಕಾ ಅಧ್ಯಕ್ಷರಿಗೆ ಆಹ್ವಾನ ನೀಡುವ ವಿಚಾರವನ್ನು ಪುನರ್ ಪರಿಶೀಲಿಸಬೇಕು' ಎಂದು ಡಿಎಂಕೆ ಪಕ್ಷದ ವಕ್ತಾರ ಇಳಂಗೋವನ್ ಅವರು ಹೇಳಿದ್ದಾರೆ.

ಇದೇ ಮೇ 26ರಂದು ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ವಿವಿಧ ದೇಶಗಳ ಅಧ್ಯಕ್ಷರಿಗೆ ಆಹ್ವಾನ ನೀಡಲಾಗಿತ್ತು. ಈ ಪೈಕಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ಅಧ್ಯಕ್ಷರಿಗೆ ಆಹ್ವಾನ ನೀಡಿದ ಕುರಿತು ಅಸಮಾಧಾನ ಭುಗಿಲೆದ್ದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.