ಈಗಿನ ಸುದ್ದಿ

ಮೋದಿ ಪ್ರಮಾಣವಚನ ಸಮಾರಂಭಕ್ಕೆ ಪಾಕ್ ಪ್ರಧಾನಿ ಆಗಮನ ಸಾಧ್ಯತೆ

ಮೋದಿ ಪ್ರಮಾಣವಚನ ಸಮಾರಂಭಕ್ಕೆ ಪಾಕ್ ಪ್ರಧಾನಿ ಆಗಮನ ಸಾಧ್ಯತೆ
Published On :

ನವದೆಹಲಿ: ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಆಹ್ವಾನಕ್ಕೆ ಪಾಕಿಸ್ತಾನ ಸಕಾರಾತ್ಮಕವಾಗಿ ಸ್ಪಂಧಿಸಿದ್ದು, ಮೇ 26ರಂದು ನಡೆಯುವ ಅದ್ಧೂರಿ ಸಮಾರಂಭದಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಭಾಗವಹಿಸುವ ಸಾಧ್ಯತೆ ಇದೆ.

ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭಕ್ಕೆ ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಷೆ ಹಾಗೂ ಅಫ್ಘಾನಿಸ್ತಾನ ಅಧ್ಯಕ್ಷ ಅಮಿದ್ ಕರ್ಝಾಯಿ ಆಗಮಿಸುವ ಬಗ್ಗೆ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ಸರ್ಕಾರಗಳು ಖಚಿತಪಡಿಸಿದ ಬೆನ್ನಲ್ಲೇ, ಷರೀಫ್ ಆಗಮಿಸುವ ಬಗ್ಗೆ ಪಾಕ್ ಸರ್ಕಾರ ಸುಳಿವು ನೀಡಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ನಿರ್ಧಾರವನ್ನು ಇಸ್ಲಾಮಾಬಾದ್ ಪ್ರಕಟಿಸಿಲ್ಲ.

ದೆಹಲಿಯಲ್ಲಿ 26ರಂದು ನಡೆಯುವ ಸಮಾರಂಭದಲ್ಲಿ ನವಾಜ್ ಷರೀಫ್ ಅವರು ಭಾಗವಹಿಸಲಿದ್ದಾರೆ ಎಂದು ಷರೀಫ್ ಅವರ ಪಿಎಂಎಲ್(ಎನ್) ಪಕ್ಷದ ವಕ್ತಾರ ಸಿದ್ದೀಖಿ ಫಾರೂಖ್ ಅವರು ಸುದ್ದಿವಾಹಿನಿಯೊಂದಕ್ಕೆ ಹೇಳಿದ್ದಾರೆ.

ನವಾಜ್ ಷರೀಫ್ ಅವರು ಭಾರತದ ನೂತನ ಪ್ರಧಾನಿಯನ್ನು ಭೇಟಿ ಮಾಡಿ, ಉಭಯ ರಾಷ್ಟ್ರಗಳ ನಡುವಿನ ಸಂಬಂಧ ವೃದ್ಧಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಲಿದ್ದಾರೆ ಎಂದು ಪಿಎಂಎಲ್ ನಾಯಕ ತಿಳಿಸಿದ್ದಾರೆ.

ಮೋದಿ ಸಮಾರಂಭಕ್ಕೆ ಷರೀಫ್ ಆಗಮಿಸುವುದು ಬಹುತೇಕ ಖಚಿತವಾಗಿದ್ದು, ಪಾಕಿಸ್ತಾನ ವಿದೇಶಾಂಗ ಕಾರ್ಯಾಲಯ ಈ ಬಗ್ಗೆ ಇಂದು ಸಂಜೆಯೊಳಗೆ ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.