ಈಗಿನ ಸುದ್ದಿ

ಕೇಜ್ರಿವಾಲ್ ನ್ಯಾಯಾಂಗ ಬಂಧನ ಜೂನ್ 6ರವರೆಗೆ ವಿಸ್ತರಣೆ

ಕೇಜ್ರಿವಾಲ್ ನ್ಯಾಯಾಂಗ ಬಂಧನ ಜೂನ್ 6ರವರೆಗೆ ವಿಸ್ತರಣೆ
Published On :

ನವದೆಹಲಿ: ಜಾಮೀನು ನಿರಾಕರಿಸಿ ಜೈಲಿಗೆ ಹೋಗಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜೂನ್ 6ರವರೆಗೆ ವಿಸ್ತರಿಸಲಾಗಿದೆ.

ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ, ಇಂದು ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಪಟಿಯಾಲ ಹೌಸ್ ಕೋರ್ಟ್, ಕೇಜ್ರಿವಾಲ್ ಬಂಧನದ ಅವಧಿಯನ್ನು ಜೂನ್ 6ರವರೆಗೆ ವಿಸ್ತರಿಸಿ ಆದೇಶಿಸಿದೆ.

ಬಿಜೆಪಿ ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಸಲ್ಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ಜಾಮೀನು ಪಡೆಯಲು ನಿರಾಕರಿಸಿದ್ದರು. ಹೀಗಾಗಿ ಅವರನ್ನು ಕೋರ್ಟ್ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.

ಚುನಾವಣೆಗೂ ಮುನ್ನ ಭ್ರಷ್ಟ್ರರ ಪಟ್ಟಿ ಬಿಡುಗಡೆ ಮಾಡಿದ್ದ ಅರವಿಂದ್ ಕೇಜ್ರಿವಾಲ್ ನಿತಿನ್ ಗಡ್ಕರಿ ಅವರ ಹೆಸರನ್ನು ಸೇರಿಸಿದ್ದರು. ನಿತಿನ್ ಗಡ್ಕರಿ ದೆಹಲಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ವಿಚಾರಣೆ ನಡೆಸಿದ ನ್ಯಾಯಾದೀಶರಾದ ಗೋಮತಿ ಮನೋಚ, 10 ಸಾವಿರ ವೈಯಕ್ತಿಕ ಬಾಂಡ್ ನೀಡಿ ಜಾಮೀನು ಪಡೆಯುವಂತೆ ಕೇಜ್ರಿವಾಲ್‌ಗೆ ಸೂಚಿಸಿದರು. ಆದರೆ, ಅವರು ಅದಕ್ಕೆ ಒಪ್ಪಲಿಲ್ಲ. ನಾನೇಕೆ ಜಾಮೀನು ಪಡೆಯಲಿ ಎಂದು ಪ್ರಶ್ನಿಸಿದರು. ಅನಿವಾರ್ಯವಾಗಿ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.