ಈಗಿನ ಸುದ್ದಿ

ಮೋದಿ ಪ್ರಮಾಣ ವಚನಕ್ಕೆ ದೀದಿ ಗೈರು

ಮೋದಿ ಪ್ರಮಾಣ ವಚನಕ್ಕೆ ದೀದಿ ಗೈರು
Published On :

ಕೋಲ್ಕತಾ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೈರಾಗಲಿದ್ದಾರೆ.

ಈ ಹಿಂದೆ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗದಂತೆ ಪಕ್ಷದ ಮುಖಂಡರಿಗೆ ಸೂಚಿಸಿದ್ದ ಮಮತಾ ಬ್ಯಾನರ್ಜಿ ಅವರು ಇದೀಗ ತಮ್ಮ ನಿಲುವು ಬದಲಿಸಿದ್ದಾರೆ. ಸಮಾರಂಭಕ್ಕೆ ತಾವು ಹಾಜರಾಗದಿದ್ದರೂ ತೃಣಮೂಲ ಕಾಂಗ್ರೆಸ್ ಪಕ್ಷದ ಪರವಾಗಿ ಪಕ್ಷದ ಮುಖಂಡರಾದ ಮುಕುಲ್ ರಾಯ್ ಅವರನ್ನು ಕಳುಹಿಸಿಕೊಡುವ ಸಾಧ್ಯತೆ ಇದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಅಲ್ಲದೆ ಅಕ್ರಮ ಬಾಂಗ್ಲಾ ನುಸುಳುಕೋರರನ್ನು ತಡೆಯುವಲ್ಲಿ ಮಮತಾ ಸರ್ಕಾರ ವಿಫಲವಾಗಿತ್ತು ಎಂದು ಮೋದಿ ಹೇಳಿದ್ದರು. ಈ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ಅವರು ಕೂಡ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೇ ಕಾರಣಕ್ಕಾಗಿ ಮಮತಾ ಅವರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೇ ಮೇ 26ರಂದು ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಾರಂಭದಲ್ಲಿ ವಿವಿಧ ದೇಶಗಳ ಸಾರ್ಕ್ ಸಮಿತಿಯ ಸದಸ್ಯರು ಮತ್ತು ವಿವಿಧ ರಾಜಕೀಯ ಪಕ್ಷಗಳ ಗಣ್ಯರು ಸೇರಿದಂತೆ ಒಟ್ಟು ಸುಮಾರು 2, 500 ಮಂದಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.