ಪುನಃ ಜಸ್ವಂತ್ ಸಿಂಗ್ ಬಿಜೆಪಿ ಸೇರ್ಪಡೆ?

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಜಸ್ವಂತ್ ಸಿಂಗ್ ಪುನಃ ಪಕ್ಷಕ್ಕೆ ಮರಳಲು ಪ್ರಯತ್ನಿಸಿದ್ದು, ಈ ಸಂಬಂಧ ಶುಕ್ರವಾರ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಆಡ್ವಾಣಿ ಅವರನ್ನು ಭೇಟಿ ಮಾಡಿದರು.
ಬಿಜೆಪಿಯಿಂದ ಟಿಕೆಟ್ ಸಿಗದೆ ಪಕ್ಷ ತೊರೆದು ರಾಜಸ್ಥಾನದ ಬಾರ್ಮರ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಸ್ವಂತ್ ಸಿಂಗ್ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಇದೀಗ ಮತ್ತೆ ಮಾತೃಪಕ್ಷಕ್ಕೆ ಮರಳಲು ಯತ್ನಿಸುತ್ತಿರುವ ಅವರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇಂದು ಬೆಳಗ್ಗೆ ಆಡ್ವಾಣಿ ಅವರ ನಿವಾಸದಲ್ಲಿ ಭೇಟಿ ಮಾಡಿದ ಜಸ್ವಂತ್ ಸಿಂಗ್ ಚರ್ಚೆ ನಡೆಸಿದ್ದಾರೆ ಇದು ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬಾರ್ಮರ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ಜಸ್ವಂತ್ ಸಿಂಗ್ ಅವರಿಗೆ ಉಮೇದುವಾರಿಕೆಯನ್ನು ವಾಪಸ್ ತೆಗೆದುಕೊಳ್ಳುವಂತೆ ಬಿಜೆಪಿ ಹೇಳಿತ್ತು. ಆದರೆ ಇದಕ್ಕೆ ಕಿಮ್ಮತ್ತು ಕಾಸು ಬೆಲೆ ಕೊಡದ ಜಸ್ವಂತ್, ನಾಮಪತ್ರ ಹಿಂಪಡೆಯದೆ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿಯ ಸೋನರಾಮ್ ಚೌಧರಿ ವಿರುದ್ಧ ಸೋಲು ಅನುಭವಿಸಿದ್ದರು. ನಾಮಪತ್ರ ಹಿಂಪಡೆಯ ಹಿನ್ನೆಲೆಯಲ್ಲಿ ಜಸ್ವಂತ್ ಸಿಂಗ್ರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಚಾಟಿಸಿತ್ತು.
ಇದಕ್ಕೂ ಮುನ್ನ 2009ರಲ್ಲಿ ಪಾಕಿಸ್ತಾನ ಸಂಸ್ಥಾಪಕ ಮಹಮದ್ ಅಲಿ ಜಿನ್ನಾ ಪರ ಮಾತನಾಡಿದಕ್ಕಾಗಿ ಬಿಜೆಪಿಯಿಂದ ಉಚ್ಚಾಟನೆ ಗೊಂಡಿದ್ದರು. ಇದಾದ ನಂತರ ಆಡ್ವಾಣಿಯವರ ಮಧ್ಯಸ್ಥಿಕೆಯಲ್ಲಿ 10 ತಿಂಗಳ ನಂತರ ಪಕ್ಷಕ್ಕೆ ಮರಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


