ಈಗಿನ ಸುದ್ದಿ

ಮೋದಿ ಪ್ರಮಾಣವಚನ ಸಮಾರಂಭಕ್ಕೆ ಬರಲು ಪಾಕ್ ಪ್ರಧಾನಿ ಒಪ್ಪಿಗೆ

ಮೋದಿ ಪ್ರಮಾಣವಚನ ಸಮಾರಂಭಕ್ಕೆ ಬರಲು ಪಾಕ್ ಪ್ರಧಾನಿ ಒಪ್ಪಿಗೆ
Published On :

ನವದೆಹಲಿ: ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರು ಭಾರತದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಒಪ್ಪಿಗೆ ಸೂಚಿಸಿದ್ದಾರೆ.

ನೆರೆಯ ರಾಷ್ಟ್ರಗಳೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಣೆ ನಿಟ್ಟಿನಲ್ಲಿ ಪಾಕಿಸ್ತಾನ ಸೇರಿದಂತೆ ಸಾರ್ಕ್ ರಾಷ್ಟ್ರಗಳಿಗೆ ಮೋದಿ ತಮ್ಮ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಿದ್ದರು. ಇದಕ್ಕೆ ಸಾರ್ಕ್ ಸದಸ್ಯ ರಾಷ್ಟ್ರಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿವೆ.

ನಿನ್ನೆಯಷ್ಟೇ ಭಾರತದ ಆಮಂತ್ರಣ ಕುರಿತಂತೆ ಶುಕ್ರವಾರ ತನ್ನ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಪಾಕಿಸ್ತಾನ ಈವರೆಗೂ ಅಧಿಕೃತವಾಗಿ ನಿರ್ಧಾರ ಪ್ರಕಟಿಸಿಲ್ಲ. ಆದರೆ ಈ ಬಗ್ಗೆ ಟ್ವಿಟ್ ಮಾಡಿರುವ ಪಾಕಿಸ್ತಾನಿ ಪತ್ರಕರ್ತೆ ನಸಿಮ್ ಜೆಹ್ರಾ ಅವರು, ಮೇ 26ರಂದು ದೆಹಲಿಗೆ ತೆರಳಲು ಪಾಕ್ ಪ್ರಧಾನಿ ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ ಮೋದಿ ಸಮಾರಂಭಕ್ಕೆ ಆಗಮಿಸಲು ಷರೀಫ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಈಗಾಗಲೇ ತಮ್ಮ ಉಪಸ್ಥಿತಿ ಖಚಿತಪಡಿಸಿರುವ ದೇಶಗಳು

ಶ್ರೀಲಂಕಾ    ಅಧ್ಯಕ್ಷ ಮಹಿಂದ ರಾಜಪಕ್ಸೆ

ಬಾಂಗ್ಲಾದೇಶ    ಸ್ಪೀಕರ್ ಶಿರಿನ್ ಚೌಧರಿ (ಪ್ರಧಾನಿ ಹಸೀನಾ ಜಪಾನ್ ಭೇಟಿ ಕಾರಣ)

ಅಪ್ಘಾನಿಸ್ತಾನ    ಅಧ್ಯಕ್ಷ ಹಮೀದ್ ಕರ್ಜೈ

ಭೂತಾನ್    ಪ್ರಧಾನಿ ತ್ಸೆರಿಂಗ್ ತೋಬ್ಗೆ

ನೇಪಾಳ    ಪ್ರಧಾನಿ ಸುಶೀಲ್ ಕೊಯಿರಾಲಾ

ಮಾಲ್ಡೀವ್    ಅಧ್ಯಕ್ಷ ಅಬ್ದುಲ್ಲಾ ಯಾಮೀನ್

ಮಾರಿಷಸ್    ಪ್ರಧಾನಿ ನವೀನ್ ರಾಮ್‌ಗುಲಾಮ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.