ಈಗಿನ ಸುದ್ದಿ

ಜೆಪಿ ನಡ್ಡಾ ಬಿಜೆಪಿ ಅಧ್ಯಕ್ಷ ಸ್ಥಾನ ಆಕಾಂಕ್ಷಿ

ಜೆಪಿ ನಡ್ಡಾ ಬಿಜೆಪಿ ಅಧ್ಯಕ್ಷ ಸ್ಥಾನ ಆಕಾಂಕ್ಷಿ
Published On :

ಶಿಮ್ಲಾ: ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ರಾಜನಾಥ್ ಸಿಂಗ್‌ಗೆ ಸ್ಥಾನ ಲಭಿಸಿದರೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಜೆ ಪಿ ನಡ್ಡಾ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನ ಒಲಿಯಲಿದೆ.

ಹಿಮಾಚಲ ಪ್ರದೇಶದ ರಾಜ್ಯಸಭಾ ಸಂಸದರಾಗಿರುವ ನಡ್ಡಾ ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಆಪ್ತರಾಗಿರುವುದರಿಂದ ಪ್ರಸ್ತುತ ಪದವಿಗೆ ಅವರನ್ನು ನೇಮಕ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.

ನಡ್ಡಾ ಬಿಜೆಪಿ ಪಕ್ಷದ ನಾಯಕತ್ವ ವಹಿಸಲು ಸಮರ್ಥರಾಗಿದ್ದು,  ಬಿಜೆಪಿ ಮತ್ತು ಆರೆಸ್ಸೆಸ್ಸ್ ನ್ನು ಜತೆಯಾಗಿ ನಿಭಾಯಿಸಬಲ್ಲವರಾಗಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಶನಿವಾರ ಹೇಳಿದ್ದಾರೆ.

ಎಬಿವಿಪಿ ಮೂಲಕ 1978ರಲ್ಲಿ ಬಿಜೆಪಿಗೆ ಪ್ರವೇಶಿಸಿದ ನಡ್ಡಾ 1991-94 ರ ಅವಧಿಯಲ್ಲಿ ಭಾರತೀಯ ಯುವ ಮೋರ್ಚಾದಲ್ಲಿ  ಗಡ್ಕರಿ ಮತ್ತು ಶಾ ಜತೆ ಕೆಲಸ ಮಾಡಿದ ಅನುಭವವೂ ಇದೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯ ನಾಲ್ಕು ಸೀಟುಗಳನ್ನೂ ಗೆಲ್ಲುವಂತೆ ಮಾಡಿದ್ದು ನಡ್ಡಾ ಅವರ ಚಾಕಚಕ್ಯತೆಯೇ ಆಗಿರುವುದಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ನಡ್ಡಾ ಅವರೇ ಸೂಕ್ತ ವ್ಯಕ್ತಿ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.