ಕೆಲವರಿಗೆ ಜೈಲಿಗೆ ಹೋಗೋದೆ ಫ್ಯಾಷನ್: ಕೇಜ್ರಿ ವಿರುದ್ಧ ಅಣ್ಣಾ ಟೀಕೆ

ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು, ಕೆಲವರಿಗೆ ಜೈಲಿಗೆ ಹೋಗೋದೆ ಫ್ಯಾಷನ್ ಆಗಿದೆ ಎಂದು ಭಾನುವಾರ ಲೇವಡಿ ಮಾಡಿದ್ದಾರೆ.
ಬೆಂಗಳೂರಿನ ಗಾಂಧಿ ಭವನದಲ್ಲಿ ಅಸಲಿ ಆಜಾದಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅಣ್ಣಾ ಹಜಾರೆಯಾವರು, ಹೋರಾಟಗಾರನಿಗೆ ಜೈಲಿಗೆ ಹೋಗುವುದು ಭೂಷಣ ಆದರೆ ಕೆಲವರಿಗೆ ಜೈಲಿಗೆ ಹೋಗುವುದು ಫ್ಯಾಷನ್ ಆಗಿದೆ ಎಂದು ಕೇಜ್ರಿವಾಲ್ ಹಾಗೂ ಆಪ್ ಕಾರ್ಯಕರ್ತರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಮಾನನಷ್ಟ ಮೊಕದ್ದಮೆ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೇಜ್ರಿವಾಲ್ರ ಕುರಿತಾಗಿ ಪ್ರತಿಕ್ರಿಯಿಸಿರುವ ಅಣ್ಣಾ ಹಜಾರೆ, ಕೆಲವರಿಗೆ ಪದೇ ಪದೆ ಜೈಲಿಗೆ ಹೋಗುವುದು ಫ್ಯಾಷನ್ ಆಗಿದೆ ಎಂದು ಟೀಕಿಸಿದ್ದಾರೆ
ಕೇಜ್ರಿವಾಲ್ರ ಆಟಾಟೋಪದ ಕುರಿತಾಗಿ ನಾನು ಅವರಿಗೆ ಯಾವುದೇ ಸಲಹೆ ನೀಡುವುದಿಲ್ಲ. ಯಾಕಂದ್ರೆ ಅವರು ಈಗ ನನ್ನ ವ್ಯಾಪ್ತಿಯಲ್ಲಿ ಇಲ್ಲ. ಕೇಜ್ರಿವಾಲ್ ವ್ಯಾಪ್ತಿಗೆ ನಿಲುಕದ ಮಟ್ಟದಲ್ಲಿದ್ದಾರೆ ಎಂದು ಚೇಡಿಸಿದರು.
ಲೋಕಸಭೆ ಚುನಾವಣೆ ವೇಳೆ ಭ್ರಷ್ಟರ ಪಟ್ಟಿ ಬಿಡುಗಡೆ ಮಾಡಿದ್ದ ಕೇಜ್ರಿವಾಲ್, ಪಟ್ಟಿಯಲ್ಲಿ ಬಿಜೆಪಿ ಹಿರಿಯ ಮುಖಂಡ ನಿತಿನ್ ಗಡ್ಕರಿ ಹೆಸರನ್ನು ನಮೂದಿಸಿದ್ದರು. ಅಲ್ಲದೆ ನಿತಿನ್ ಗಡ್ಕರಿ ಒಬ್ಬ ಕಳ್ಳ ಎಂದು ಜರಿದಿದ್ದರು. ಇದರ ವಿರುದ್ಧ ನಿತಿನ್ ಗಡ್ಕರಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಹೀಗಾಗಿ ಕೇಜ್ರಿವಾಲ್ ವಿರುದ್ಧ ದೆಹಲಿ ಸೆಷನ್ಸ್ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿತ್ತು. ಈ ಮಧ್ಯೆ ಜಾಮೀನು ಅರ್ಜಿ ಸಲ್ಲಿಸುವಂತೆ ಕೇಜ್ರಿಗೆ ಕೋರ್ಟ್ ಆದೇಶಿಸಿತು. ಆದರೆ ಇದನ್ನು ತಿರಸ್ಕರಿಸಿದ್ದ ಕೇಜ್ರಿವಾಲ್, ನಾನು ಭ್ರಷ್ಟಾಚಾರದ ವಿರುದ್ಧ ಹೋರಾಡಿದ್ದೆ ಹೀಗಾಗಿ ನಾನು ಜಾಮೀನು ಅರ್ಜಿ ಸಲ್ಲಿಸುವುದಿಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಕೇಜ್ರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.
ಭ್ರಷ್ಟಚಾರದ ವಿರುದ್ಧ ಹೋರಾಟ ನಡೆಸಿ ಲೋಕಪಾಲ್ ಮಸೂದೆ ಜಾರಿಗಾಗಿ ಉಪವಾಸ ಸತ್ಯಾಗ್ರಹ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರ ತಂಡದಲ್ಲಿ ಗುರುತಿಸಿಕೊಂಡಿದ್ದ ಅರವಿಂದ್ ಕೇಜ್ರಿವಾಲ್ ತದ ನಂತರ ಅಣ್ಣಾ ಹಜಾರೆಯವರ ವಿರೋಧದ ನಡುವೆಯು ರಾಜಕೀಯ ಪಕ್ಷ ಕಟ್ಟಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಮಣ್ಣು ಮುಕ್ಕಿಸಿ ಅಧಿಕಾರದ ಗುದ್ದುಗೆ ಏರಿದ್ದ ಕೇಜ್ರಿವಾಲ್ ಕೇವಲ 49 ದಿನಗಳ ಅಧಿಕಾರ ನಡೆಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದು ರಾಜಕೀಯ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


