ಈಗಿನ ಸುದ್ದಿ

ಜಗನ್ ಬಣದ ಮೊದಲ ವಿಕೆಟ್ ಪತನ

ಜಗನ್ ಬಣದ ಮೊದಲ ವಿಕೆಟ್ ಪತನ
Published On :

ಹೈದರಾಬಾದ್: ಲೋಕಸಭಾ ಚುನಾವಣೆ ಮುಗಿದು ಇನ್ನು 10 ದಿನಗಳು ಕಳೆಯುವುದರೊಳಗಾಗಿಯೇ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮೊದಲ ವಿಕೆಟ್ ಪತನವಾಗಿದೆ.

ನಾಂಡ್ಯಲ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದ ಎಸ್‌ಪಿವೈ ರೆಡ್ಡಿ ಇಂದು ವೈಎಸ್‌ಆರ್ ಕಾಂಗ್ರೆಸ್ ಪಕ್ಷವನ್ನು ತೊರೆದು ತೆಲುಗುದೇಶಂ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಷ್ಟೇ ರೆಡ್ಡಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷವನ್ನು ಸೇರಿದ್ದು, ವರ್ಷ ಮುಗಿಯುವುದರೊಳಗಾಗಿಯೇ ಮತ್ತೊಂದು ಪಕ್ಷಕ್ಕೆ ಹಾರಿದ್ದಾರೆ. ನವದೆಹಲಿಯಲ್ಲಿ ಟಿಡಿಪಿ ಮುಖ್ಯಸ್ಥ ಮತ್ತು ಆಂಧ್ರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ನಡೆದ ಭೇಟಿಯ ನಂತರ ಎಸ್‌ಪೇವೈ ರೆಡ್ಡಿ ಟಿಡಿಪಿ ಪಕ್ಷವನ್ನು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಂತೆಯೇ ಕರ್ನೂಲ್ ಕ್ಷೇತ್ರದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮತ್ತೋರ್ವ ಸಂಸದರಾದ ಬುಟ್ಟಾ ರೇಣುಕಾ ಅವರು ಕೂಡ ಟಿಡಿಪಿ ಪಕ್ಷವನ್ನು ಸೇರುವ ಕುರಿತು ಮಾಹಿತಿಗಳು ಕೇಳಿಬರುತ್ತಿವೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವಲ ಸಂಸದ ರೆಡ್ಡಿ, ವೈಎಸ್‌ಆರ್ ಕಾಂಗ್ರೆಸ್ ಪಕ್ಷದೊಂದಿಗೆ ಕೆಲವು ಭಿನ್ನಾಭಿಪ್ರಾಯಗಳಿದ್ದು, ನನ್ನ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ನಾನು ಟಿಡಿಪಿ ಪಕ್ಷವನ್ನು ಸೇರುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.