ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಂಸದ ಯಡಿಯೂರಪ್ಪ

ಶಿವಮೊಗ್ಗ: ಶಿವಮೊಗ್ಗ ಕ್ಷೇತ್ರದ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜಿನಾಮೆ ನೀಡಿದ್ದಾರೆ.
2013ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಯಡಿಯೂರಪ್ಪ ಅವರು ಶಾಸಕರಾಗಿ ಆಯ್ಕೆಗೊಂಡಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿದ್ದು, ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಯಡಿಯೂರಪ್ಪ ಅವರು ತಮ್ಮ ರಾಜಿನಾಮೆ ಪತ್ರವನ್ನು ಇಂದು ಕಳುಹಿಸಿದ್ದು, ಮೇ 30ರಿಂದ ಅನ್ವಯವಾಗುವಂತೆ ತಮ್ಮ ರಾಜಿನಾಮೆಯನ್ನು ಅಂಗೀಕರಿಸುವಂತೆ ಸ್ಪೀಕರ್ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
2013ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಎಸ್. ಯಡಿಯೂರಪ್ಪ, ಸುಮಾರು 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದರು. ಯಡ್ಡಿ ರಾಜಿನಾಮೆಯಿಂದ ತೆರವುಗೊಂಡಿರುವ ಶಿಕಾರಿಪುರ ವಿಧಾನಸಭೆಗೆ ಆರು ತಿಂಗಳಿನಲ್ಲಿ ಉಪ ಚುನಾವಣೆ ನಡೆಯಲಿದ್ದು, ಇದರಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ಸ್ಪರ್ಧಿಸುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


