ಹಳಿ ತಪ್ಪಿದ ಗೋರಖ್‌ಧಾಮ್ ಎಕ್ಸ್‌ಪ್ರೆಸ್ ರೈಲು: 40 ಸಾವು

ಗೋರಖ್‌ಪುರ: ಉತ್ತರ ಪ್ರದೇಶದ ಬಸ್ತಿ ಬಳಿ ಗೋರಖ್‌ಧಾಮ್ ಎಕ್ಸ್‌ಪ್ರೆಸ್ ರೈಲು ದುರಂತಕ್ಕಿಡಾಗಿದ್ದು, ಘಟನೆಯಲ್ಲಿ 40 ಮಂದಿ ಮೃತಪಟ್ಟಿದ್ದಾರೆ ಮತ್ತು 100ಕ್ಕು ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ದೆಹಲಿಯಿಂದ ಗೋರಖ್‌ಪುರಕ್ಕೆ ಆಗಮಿಸುತ್ತಿದ್ದ ಗೋರಖ್‌ಧಾಮ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ಗೂಡ್ಸ್ ರೈಲೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ರೇಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ರೇಲ್ವೇ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಒಂದೇ ಹಳಿಯಲ್ಲಿ ಎರಡೂ ರೈಲುಗಳ ಆಗಮಿಸಿದ ಪರಿಣಾಮವಾಗಿ ಈ ಭೀಕರ ಅಫಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಪಘಾತದ ರಭಸಕ್ಕೆ ಆರು ಭೋಗಿಗಳು ಹಳಿ ತಪ್ಪಿ ನೆಲಕ್ಕುರುಳಿವೆ. ಅಪಘಾತದಲ್ಲಿ ರೈಲು ಚಾಲಕ ಮತ್ತು ಆತನ ಸಹಾಯಕ ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದ್ದು, ಭೋಗಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆಯಲು ರೇಲ್ವೆ ಸಿಬ್ಬಂದಿ ಮತ್ತು ಅಗ್ನಿ ಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.
ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಈ ಕುರಿತು ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಮಧ್ಯೆ ಘಟನೆಯ ಬಗ್ಗೆ ಟ್ವಿಟ್ ಮಾಡಿರುವ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು, ರೈಲು ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


