ಮೋದಿ ಜತೆ ಸಕಾರಾತ್ಮಕ ಮಾತುಕತೆ ನಡೆದಿದೆ: ಪಾಕ್ ಪ್ರಧಾನಿ ಷರೀಫ್

ನವದೆಹಲಿ: ಉಭಯ ದೇಶಗಳ ಪಾಲಿಗೆ ಇದು ಐತಿಹಾಸಿಕ ಕ್ಷಣ ಎಂದು ಹೇಳಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ಸಕಾರಾತ್ಮಕವಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.
ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಸುಮಾರು 50 ನಿಮಿಷಗಳ ಕಾಲ ಭಾರತದ ನೂತನ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ಭಾರತಕ್ಕೆ ಭೇಟಿ ನೀಡಿರುವುದಕ್ಕೆ ನನಗೆ ಹೆಮ್ಮೆ ಎನಿಸುತ್ತಿದೆ. ಮೋದಿ ಅವರೊಂದಿಗೆ ಸಕಾರಾತ್ಮಕ ಮಾತುಕತೆ ನಡೆದಿದೆ ಎಂದು ತಿಳಿಸಿದರು.
ಮಾತುಕತೆ ವೇಳೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಸಹ ಉಪಸ್ಥಿತರಿದ್ದರು.
ಮೂಲಗಳ ಪ್ರಕಾರ, ಮೋದಿ ಈ ಐದು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.
1. ಭಯೋತ್ಪಾದಕರ ದಾಳಿ ಕೂಡಲೇ ನಿಲ್ಲಬೇಕು
2. ಮುಂಬೈ ದಾಳಿ ಪ್ರಕರಣದ ವಿಚಾರಣೆ ತೃಪ್ತಿಕರವಾಗಿಲ್ಲ
3. ಮುಂಬೈ ದಾಳಿ ಕೋರರ ವಿರುದ್ಧ ಪಾಕಿಸ್ತಾನ ಯಾವುದೇ ಕ್ರಮಕೈಗೊಂಡಿಲ್ಲ
4. ಮುಂಬೈ ದಾಳಿಕೋರರ ಧ್ವನಿ ಮಾದರಿ ನೀಡಲು ಒತ್ತಾಯ
5. ಉಗ್ರರ ದಮನಕ್ಕೆ ಪ್ರಾದೇಶಿಕ ಸಹಕಾರ ಅಗತ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


