ಅನಿಲದರ ಏರಿಕೆ ಬಗ್ಗೆ ಮೌನ ವಹಿಸಿದ ತೈಲ ಸಚಿವ

ನವದೆಹಲಿ: ಅನಿಲ ದರ ಏರಿಕೆ ವಿಚಾರ ಮುಂದಿರುವ ಈ ವೇಳೆಯಲ್ಲಿ ಮೋದಿ ಸರ್ಕಾರದಲ್ಲಿ ತೈಲ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಧರ್ಮೇಂದ್ರ ಪ್ರಧಾನ್, ತಾವು ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ಮುಂದಿನ ಹೆಜ್ಜೆಗಳನ್ನಿಡುವುದಾಗಿ ಹೇಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಸಚಿವರಾಗಿದ್ದ ಒಡಿಶಾದ ದೇಬೇಂದ್ರ ಪ್ರಧಾನ್ ಅವರ ಪುತ್ರರಾಗಿದ್ದಾರೆ ಧರ್ಮೇಂದ್ರ ಪ್ರಧಾನ್. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಗ್ಗೆ ಜನರಿಗೆ ಹೆಚ್ಚಿನ ಭರವಸೆ ಇದೆ, ನಾವು ಅದನ್ನೆಲ್ಲಾ ಈಡೇರಿಸುತ್ತೇವೆ ಎಂದು ಪ್ರಧಾನ್ ಹೇಳಿದ್ದಾರೆ. ಅದೇ ವೇಳೆ ತೈಲದ ಸಮಸ್ಯೆಯನ್ನು ಪರಿಹರಿಸಲು ಭಾರತ ಆರ್ಥಿಕವಾಗಿ ಸುದೃಢವಾಗಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಏತನ್ಮಧ್ಯೆ, ಅನಿಲ ದರ ಏರಿಕೆಯ ಬಗ್ಗೆ ಮೌನವಹಿಸಿದ ಸಚಿವರು, ಪ್ರಸ್ತುತ ಖಾತೆಗೆ ಸಂಬಂಧಿಸಿದಂತೆ ಹಲವಾರು ಸವಾಲು ಮತ್ತು ಸಮಸ್ಯೆಗಳಿವೆ. ಎಲ್ಲವನ್ನೂ ಪರಿಹರಿಸುವೆ ಎಂದು ಆಶ್ವಾಸನೆ ನೀಡುವ ಮುನ್ನ ನನಗೆ ಇದರ ಬಗ್ಗೆ ಅರಿತುಕೊಳ್ಳಬೇಕಾಗಿದೆ. ನನಗೆ ಈ ಖಾತೆಯಲ್ಲಿರುವ ಸವಾಲುಗಳೇನು ಎಂಬುದು ಗೊತ್ತಿದೆ ಎಂದು ಸಚಿವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


