ಈಗಿನ ಸುದ್ದಿ

ಬಾಂಡ್ ಸಲ್ಲಿಕೆ; ಕೇಜ್ರಿವಾಲ್‌ಗೆ ಜಾಮೀನು

ಬಾಂಡ್ ಸಲ್ಲಿಕೆ; ಕೇಜ್ರಿವಾಲ್‌ಗೆ ಜಾಮೀನು
Published On :

ನವದೆಹಲಿ: ಮಾನನಷ್ಟ ಪ್ರಕರಣದಲ್ಲಿ ಜೈಲು ಪಾಲಾಗಿದ್ದ  ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಮಂಗಳವಾರ ಜಾಮೀನು ಲಭಿಸಿದೆ.

ಚುನಾವಣೆಗೆ ಮುನ್ನ ಭ್ರಷ್ಟರ ಪಟ್ಟಿ ಬಿಡುಗಡೆ ಮಾಡಿದ್ದ ಕೇಜ್ರಿವಾಲ್ ಅದರಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ನಿತಿನ್ ಗಡ್ಕರಿ ಅವರ ಹೆಸರನ್ನೂ ಉಲ್ಲೇಖಿಸಿದ್ದರು. ಇದನ್ನು ಖಂಡಿಸಿದ ಗಡ್ಕರಿ ಕೇಜ್ರಿವಾಲ್ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾಧೀನ ಕೋರ್ಟ್, 10 ಸಾವಿರ ರುಪಾಯಿ ಮೊತ್ತದ ವೈಯಕ್ತಿಕ ಬಾಂಡ್ ನೀಡಿ ಜಾಮೀನು ಪಡೆದುಕೊಳ್ಳುವಂತೆ ಸೂಚಿಸಿತ್ತು. ಆದರೆ ಇದಕ್ಕೆ ಕೇಜ್ರಿವಾಲ್ ಅವರು ಒಪ್ಪಿರಲಿಲ್ಲ. ನಾನೇಕೆ ಜಾಮೀನು ಪಡೆಯಲಿ ಎಂದು ದೆಹಲಿ ಮಾಜಿ ಸಿಎಂ ಪ್ರಶ್ನಿಸಿದ್ದರು. ಹೀಗಾಗಿ ಕೋರ್ಟ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.ಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಕೇಜ್ರಿವಾಲ್ ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಕೈಲಾಶ್ ಗಂಭೀರ್ ಹಾಗೂ ನ್ಯಾ.ಸುನಿತಾ ಗುಪ್ತಾ ಅವರು, ಬಾಂಡ್ ನೀಡಿ ಜಾಮೀನು ಪಡೆದುಕೊಳ್ಳುವಂತೆ ಸೂಚಿಸಿದ್ದರು.

ಮೇ. 21ರಂದು ಬಂಧನಕ್ಕೊಳಗಾದ ಕೇಜ್ರಿವಾಲ್ ಗೆ ವೈಯಕ್ತಿಕ ಬಾಂಡ್ ನೀಡಿದ ಹಿನ್ನೆಲೆಯಲ್ಲಿ ಇದೀಗ ಜಾಮೀನು ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.