ಕಾಶ್ಮೀರ ಓಮರ್ ಅಬ್ದುಲ್ಲಾ ಅವರ ಪಿತ್ರಾರ್ಜಿತ ಆಸ್ತಿಯಲ್ಲ

ನವದೆಹಲಿ: 370ನೇ ವಿಧಿ ರದ್ದಾದರೆ ಕಾಶ್ಮೀರ ಭಾರತದ ಅಂಗವಾಗಿ ಉಳಿಯುವುದಿಲ್ಲ ಎಂದು ಓಮರ್ ಅಬ್ದುಲ್ಲಾ ಹೇಳಿಕೆಗೆ ಆರೆಸ್ಸೆಸ್ಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 370ನೇ ವಿಧಿ ಇದ್ದರೂ ಇಲ್ಲದೇ ಇದ್ದರೂ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಜಮ್ಮು ಕಾಶ್ಮೀರವೇನೂ ಓಮರ್ ಅಬ್ದುಲ್ಲಾ ಅವರ ಪಿತ್ರಾರ್ಜಿತ ಆಸ್ತಿಯಲ್ಲ ಎಂದು ಆರೆಸ್ಸೆಸ್ಸ್ ವಕ್ತಾರ ರಾಮ್ ಮಾಧವ್ ಗುಡುಗಿದ್ದಾರೆ.
ಉಧಾಮ್ಪುರ್ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಗೊಂಡ ಗೃಹ ಇಲಾಖೆ ಕಾರ್ಯಾಲಯದ ರಾಜ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಡಾ. ಜಿತೇಂದ್ರ ಸಿಂಗ್ ಜಮ್ಮು ಕಾಶ್ಮೀರದ 370 ನೇ ವಿಧಿ ರದ್ಧತಿಗೆ ಚರ್ಚೆ ನಡೆಸುವುದಾಗಿ ಹೇಳಿದ್ದರು.
370ನೇ ವಿಧಿಯ ಅನಾನುಕೂಲದ ಬಗ್ಗೆ ಜನರಿಗೆ ಮನದಟ್ಟು ಮಾಡಲು ಚರ್ಚೆ ನಡೆಸಬೇಕೆಂಬುದು ಮೋದಿ ಮತ್ತು ಸರ್ಕಾರದ ಇಚ್ಛೆಯಾಗಿದೆ ಎಂದಿದ್ದರು. ನಂತರ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ತಾವು ಪ್ರಧಾನಮಂತ್ರಿಯವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಜಿತೇಂದ್ರ ಸಿಂಗ್ ಸ್ಪಷ್ಟನೆ ನೀಡಿದ್ದರು.
ಜಿತೇಂದ್ರ ಸಿಂಗ್ ಅವರ ಹೇಳಿಕೆಗೆ ಟ್ವಿಟರ್ನಲ್ಲಿ ಖಾರವಾಗಿ ಉತ್ತರಿಸಿದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲ, 370ನೇ ವಿಧಿಯ ರದ್ಧತಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆಯೇ. ಯಾರು ಈ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಗೊತ್ತಿಲ್ಲ ಎಂದು ಟ್ವೀಟಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


