ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಬಂಧನ

ಕೊಲ್ಲಾಪುರ: ಕಳೆದ ಸೋಮವಾರ ಬಿಜೆಪಿ ವಿಜಯೋತ್ಸವದ ವೇಳೆ ಬಿಜಾಪುರದಲ್ಲಿ ನಡೆದ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಘರ್ಷಣೆಗೆ ಯತ್ನಾಳ್ ಪ್ರಚೋದನೆ ಪ್ರಮುಖ ಕಾರಣ ಎಂದು ಆರೋಪಿಸಿ ಅವರ ವಿರುದ್ಧ ಒಟ್ಟು ನಾಲ್ಕು ಕೇಸ್ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಯತ್ನಾಳ್ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು ಇಂದು ಅವರನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಘಟನೆಯ ಕುರಿತು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಬೆಳಗಾವಿ ಉತ್ತರ ವಲಯ ಐಜಿಪಿ ಬಾಸ್ಕರ್ ರಾವ್ ಅವರು, ಘಟನೆಯ ವಿಡಿಯೋ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಸುಮಾರು 100 ಜನರು ಗಲಭೆಯಲ್ಲಿ ಪಾಲ್ಗೊಂಡಿರುವುದನ್ನು ಖಚಿತಪಡಿಸಿಕೊಳ್ಳಲಾಗಿದೆ. ಘಟನೆ ಸಂಬಂಧ ಈಗಾಗಲೇ 26 ಜನರನ್ನು ಬಂಧಿಸಲಾಗಿದೆ. ಘಟನೆ ಬಳಿಕ ಯತ್ನಾಳ ಪರಾರಿಯಾಗಿದ್ದಾರೆ. ಅವರನ್ನು ಬಂಧಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸುವುದಾಗಿ ತಿಳಿಸಿದ್ದರು.
ಘಟನೆ ಕುರಿತಂತೆ ಧಾರವಾಡ ಎಸ್ಪಿ ಲೋಕೇಶಕುಮಾರ ಅವರಿಂದ ತನಿಖೆ ನಡೆಸಲಾಗುತ್ತಿದೆ. ಮೂರು ದಿನಗಳ ಕಾಲ ಬಿಜಾಪುರದಲ್ಲಿ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಹೇಳಿದ್ದರು.
ಯತ್ನಾಳ ಮೇಲೆ ನಾಲ್ಕು ಪ್ರಕರಣ: ಗಲಭೆ, ಪ್ರಚೋದನೆಯಲ್ಲಿ ಯತ್ನಾಳ ಪಾತ್ರ ನಿಚ್ಚಳವಾಗಿದೆ. ಇದಕ್ಕೂ ಮುನ್ನ ಅವರು ಮಾಡಿದ ಪ್ರಚೋದನಾಕಾರಿ ಭಾಷಣ, ನಿನ್ನೆಯ ಘಟನೆಯ ವಿಡಿಯೋ ಚಿತ್ರೀಕರಣ ಪರಿಶೀಲಿಸಲಾಗಿದೆ. ಅವರ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದ್ದು, ಎಲ್ಲವೂ ಜಾಮೀನುರಹಿತ. ಘಟನೆಯ ಬಳಿಕ ಅವರು ಪರಾರಿಯಾಗಿದ್ದಾರೆ. ಬಂಧನಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಭಾಸ್ಕರ್ ರಾವ್ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


