ಈಗಿನ ಸುದ್ದಿ

ಗೃಹಮಂತ್ರಿಯಾಗಿ ರಾಜನಾಥ್ ಸಿಂಗ್ ಅಧಿಕಾರ

ಗೃಹಮಂತ್ರಿಯಾಗಿ ರಾಜನಾಥ್ ಸಿಂಗ್ ಅಧಿಕಾರ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕಳೆದ ಸೋಮವಾರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಇಂದು ಕೇಂದ್ರ ಗೃಹಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

62 ವರ್ಷದ ರಾಜನಾಥ್ ಸಿಂಗ್ ಅವರು ಉತ್ತರ ಪ್ರದೇಶ ಲಖನೌ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲೇ ಬಿಜೆಪಿ ಅತಿ ಹೆಚ್ಚು ಬಹುಮತದಿಂದ ಅಧಿಕಾರಕ್ಕೇರಿದೆ.

ರಾಜನಾಥ್ ಸಿಂಗ್ ಅವರು ಗೃಹಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಸಂಸತ್ ಬಳಿ ಇರುವ ದೇಶದ ಮೊದಲ ಗೃಹಮಂತ್ರಿ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ಅವರ ಪ್ರತಿಮೆ ಮಾಲಾರ್ಪಣೆ ಮಾಡಿದರು.

ಗೃಹ ಸಚಿವಾಲಯದ ಕಾರ್ಯದರ್ಶಿ ಅನಿಲ್ ಗೋಸ್ವಾಮಿ ಅವರ ನೇತೃತ್ವದಲ್ಲಿ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಸಿಂಗ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.