ಈಗಿನ ಸುದ್ದಿ

ವಡೋದರಾ ಸಂಸದ ಸ್ಥಾನಕ್ಕೆ ಮೋದಿ ರಾಜಿನಾಮೆ

ವಡೋದರಾ ಸಂಸದ ಸ್ಥಾನಕ್ಕೆ ಮೋದಿ ರಾಜಿನಾಮೆ
Published On :

ವಡೋದರಾ: ಕಳೆದ ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ವಡೋದಾರ ಸಂಸದ ಸ್ಥಾನಕ್ಕೆ ಗುರುವಾರ ರಾಜಿನಾಮೆ ನೀಡಿದ್ದಾರೆ.

ಗುಜರಾತ್‌ನ ವಡೋದರಾ ಮತ್ತು ಉತ್ತರಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರಗಳಿಂದ ಗೆದ್ದು ಬಂದಿರುವ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭೆಯ ಸಂಸದನಾಗಿ ಮುಂದುವರೆಯಲು ಬಯಸಿದ್ದು, ವಡೋದರಾ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ವಡೋದರಾದಲ್ಲಿ ಸುಮಾರು 5 ಲಕ್ಷ 60 ಸಾವಿರ ಮತಗಳ ಅಂತರದಿಂದ ಗೆದ್ದು ಬಂದಿದ್ದರು. ಮತ್ತೊಂದೆಡೆ ಉತ್ತರ ಪ್ರದೇಶದ ವಾರಣಾಸಿಯಿಂದ ಸ್ಪರ್ಧಿಸಿದ್ದ ಮೋದಿಗೆ ಕಾಂಗ್ರೆಸ್ ಹಾಗೂ ಎಎಪಿ ಪ್ರಬಲ ಸ್ಪರ್ಧೆ ನೀಡಿತ್ತು. ಕಾಂಗ್ರೆಸ್‌ನಿಂದ ಅಜಯ್ ರಾಯ್ ಮತ್ತು ಎಎಪಿಯಿಂದ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮೋದಿ ಜಯಭೇರಿ ಬಾರಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.