ಈಗಿನ ಸುದ್ದಿ

ನಗರ ಪೊಲೀಸ್ ಆಯುಕ್ತರ ವರ್ಗಾವಣೆ ಇಲ್ಲ: ಗೃಹ ಸಚಿವ

ನಗರ ಪೊಲೀಸ್ ಆಯುಕ್ತರ ವರ್ಗಾವಣೆ  ಇಲ್ಲ: ಗೃಹ ಸಚಿವ
Published On :

ಬೆಂಗಳೂರು: ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಕಾಫಿ ಶಾಪ್ನಲ್ಲಿ ಎಡಿಜಿಪಿ- ಕೆಎಸ್ಆರ್ಪಿ ಡಾ ಪಿ.ರವೀಂದ್ರನಾಥ್ ಯುವತಿಯ ಫೋಟೋ ಕ್ಲಿಕ್ಕಿಸಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಪ್ರಸ್ತುತ ಪ್ರಕರಣ ತನ್ನ ಮೇಲೆ ಮಾಡಿದ ಷಡ್ಯಂತ್ರ, ಇದರಲ್ಲಿ ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರ ಕೈವಾಡವಿದೆ ಎಂದು  ಆರೋಪಿ ರವೀಂದ್ರನಾಥ್ ಆರೋಪಿಸಿದ್ದರು.

ಎಡಿಜಿಪಿ- ಕೆಎಸ್ಆರ್ಪಿ ಡಾ ಪಿ.ರವೀಂದ್ರನಾಥ್ ಮತ್ತು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ನಡುವಿನ ಜಗಳ ಬೀದಿಗೆ ಬಂದಿರುವ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮನೆಯಲ್ಲಿ ಸಭೆ ಕರೆಯಲಾಗಿತ್ತು.

ಪ್ರಸ್ತುತ ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರನ್ನು ವರ್ಗಾವಣೆ ಮಾಡುವಂತೆ ತೀರ್ಮಾನ ಕೈಗೊಳ್ಳಲಾಗಿದೆ . ಔರಾದ್ಕರ್ ವರ್ಗಾವಣೆ ಬಗ್ಗೆ ಇನ್ನೀಗ ಅಧಿಕೃತ ಆದೇಶವೊಂದೇ ಬಾಕಿಯಿದೆ. ಅದೇ ವೇಳೆ ಡಿಸಿಪಿ ರವಿಕಾಂತೇ ಗೌಡರನ್ನು ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂಬ ಸುದ್ದಿಯೂ ಕೇಳಿ ಬಂದಿತ್ತು. ಆದರೆ ಆಯುಕ್ತರ ವರ್ಗಾವಣೆ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ಕೆ.ಜೆ .ಜಾರ್ಜ್ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ನಗರ ಪೊಲೀಸ್ ಆಯುಕ್ತರ ಬದಲಾವಣೆ ಮಾಡುವುದಿಲ್ಲ ಎಂದು ಇದೀಗ ಗೃಹ ಸಚಿವರು ಹೇಳಿದ್ದಾರೆ.



ಘಟನೆ ಏನು? :  2014 ಮೇ 26 ರಂದು ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಕಾಫಿಶಾಪ್ನಲ್ಲಿ ಬೆಳಗ್ಗೆ 10.30ಕ್ಕೆ ಫ್ರೀಲ್ಯಾನ್ಸ್ ಜರ್ನಲಿಸ್ಟ್ ಆಗಿರುವ ಯುವತಿಯೊಬ್ಬಳು ತನ್ನ ಕಸಿನ್ ಜತೆ ಕುಳಿತು ಮಾತನಾಡುತ್ತಿದ್ದ ವೇಳೆ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಆ ಯುವತಿಯ ಫೋಟೋಗಳನ್ನು ಕ್ಲಿಕ್ ಮಾಡಿದ್ದಾರೆ. ಇದನ್ನು ಗಮನಿಸಿದ ಯುವತಿ ಮತ್ತು ಆಕೆಯ ಕಸಿನ್ ಫೋಟೋ ಕ್ಲಿಕ್ಕಿಸಿದ ವ್ಯಕ್ತಿಯನ್ನು ವಿಚಾರಿಸಿದಾಗ ಆತ ಕಾಫಿಶಾಪ್ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲಿಂದ ಆತನನ್ನು ಹಿಡಿದು ಮೊಬೈಲ್ ಪರಿಶೀಲಿಸಿದಾಗ ಅದರಲ್ಲಿ ಆತ ಸೆರೆ ಹಿಡಿದ ಯುವತಿಯ ಅಶ್ಲೀಲ ಫೋಟೋಗಳು ಪತ್ತೆಯಾಗಿತ್ತು. ಆತನನ್ನು ತರಾಟೆಗೆ ತೆಗೆದುಕೊಂಡಾಗ ತಾನು ಯಾರೆಂದು ಗೊತ್ತಾ? ಪೊಲೀಸರಿಗೆ ಈ ಬಗ್ಗೆ ದೂರು ನೀಡಬೇಡಿ ಎಂದು ಬೆದರಿಕೆಯನ್ನೂ ಒಡ್ಡಿದ್ದಾನೆ ಎಂದು ಯುವತಿ ತಮ್ಮ ದೂರಿನಲ್ಲಿ ಹೇಳಿದ್ದಾಳೆ. ತರಾಟೆಗೆ ತೆಗೆದುಕೊಂಡಾದ ಮೇಲೆ ಆ ವ್ಯಕ್ತಿ ತಾನು ಪೊಲೀಸ್ ಅಧಿಕಾರಿಯೆಂದು ಒಪ್ಪಿಕೊಂಡಿದರು. ಆಮೇಲೆ ನಮಗೆ ಆ ವ್ಯಕ್ತಿ ಎಡಿಜಿಪಿ-ಕೆಎಸ್ಆರ್ಪಿ ಡಾ ಪಿ.ರವೀಂದ್ರ ನಾಥ್ ಎಂಬುದು ತಿಳಿದು ಬಂತು ಎಂದು ಯುವತಿ ಹೇಳಿದ್ದಾಳೆ.

ಪ್ರಸ್ತುತ ಘಟನೆಯ ಬಗ್ಗೆ ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಬಗ್ಗೆ ಡಾ ಪಿ.ರವೀಂದ್ರ ನಾಥ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಆದಾಗ್ಯೂ, ತಾನು ತಪ್ಪು ಮಾಡಿಲ್ಲ, ಈ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ರವೀಂದ್ರನಾಥ್ ತಮ್ಮ ಪದವಿಗೆ ರಾಜಿನಾಮೆಯನ್ನು ಸಲ್ಲಿಸಿದ್ದರು. ಆದರೆ ಅವರ ರಾಜಿನಾಮೆ ಇನ್ನೂ ಸ್ವೀಕೃತಗೊಂಡಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.