ಈಗಿನ ಸುದ್ದಿ

ಪೊಲೀಸರಲ್ಲಿ ಅಶಿಸ್ತು ಬೇಡ: ಸಿದ್ದರಾಮಯ್ಯ

ಪೊಲೀಸರಲ್ಲಿ ಅಶಿಸ್ತು ಬೇಡ: ಸಿದ್ದರಾಮಯ್ಯ
Published On :

ಬೆಂಗಳೂರು: ಕಾಫಿಶಾಪ್‌ನಲ್ಲಿ ಯುವತಿ ಪೋಟೋ ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ನಿಪಕ್ಷಪಾತ ತನಿಖೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ವೇಳೆ ಹಿರಿಯ ಪೊಲೀಸರ ಹಗ್ಗಜಗ್ಗಾಟದ ಕುರಿತು ತಮ್ಮ ಅಸಹನೆಯನ್ನು ಹೊರಹಾಕಿದ್ದಾರೆ. ಪೊಲೀಸರು ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು ಅದನ್ನು ಬಿಟ್ಟು ಅಶಿಸ್ತು ಪ್ರದರ್ಶಿಸಿದರೆ ಅಂತಹ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳಿಗೆ ಖಡಕ್ಕಾಗಿ ಎಚ್ಚರಿಸಿದ್ದಾರೆ.

ಹೆಣ್ಣು ಮಗಳು ಕೊಟ್ಟ ದೂರಿನನ್ವಯ ಪ್ರಕರಣವನ್ನು ಹೀಗಾಗಲೇ ಸಿಐಡಿಗೆ ವಹಿಸಲಾಗಿದ್ದು, ನಿಪಕ್ಷಪಾತ ತನಿಖೆಯಾಗಲಿದೆ ಇದರಲ್ಲಿ ಅಪನಂಬಿಕೆ ಬೇಡ ಎಂದು ಅಧಿಕಾರಿಗಳಿಗೆ ಸಿದ್ದು ಹೇಳಿದ್ದಾರೆ. ಇದೆ ವೇಳೆ, ಪ್ರಕರಣವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಮಧ್ಯದ ಜಗ್ಗಾಟದ ವಿರುದ್ಧ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಅವರು ನಿನ್ನೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಪ್ರರಕರಣವನ್ನು ಇತ್ಯರ್ಥಗೊಳಿಸುವಂತೆ ಸೂಚಿಸಿದ್ದರು.

ಘಟನೆ ಏನು? :  2014 ಮೇ 26 ರಂದು ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಕಾಫಿಶಾಪ್ನಲ್ಲಿ ಬೆಳಗ್ಗೆ 10.30ಕ್ಕೆ ಫ್ರೀಲ್ಯಾನ್ಸ್ ಜರ್ನಲಿಸ್ಟ್ ಆಗಿರುವ ಯುವತಿಯೊಬ್ಬಳು ತನ್ನ ಕಸಿನ್ ಜತೆ ಕುಳಿತು ಮಾತನಾಡುತ್ತಿದ್ದ ವೇಳೆ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಆ ಯುವತಿಯ ಫೋಟೋಗಳನ್ನು ಕ್ಲಿಕ್ ಮಾಡಿದ್ದಾರೆ. ಇದನ್ನು ಗಮನಿಸಿದ ಯುವತಿ ಮತ್ತು ಆಕೆಯ ಕಸಿನ್ ಫೋಟೋ ಕ್ಲಿಕ್ಕಿಸಿದ ವ್ಯಕ್ತಿಯನ್ನು ವಿಚಾರಿಸಿದಾಗ ಆತ ಕಾಫಿಶಾಪ್ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲಿಂದ ಆತನನ್ನು ಹಿಡಿದು ಮೊಬೈಲ್ ಪರಿಶೀಲಿಸಿದಾಗ ಅದರಲ್ಲಿ ಆತ ಸೆರೆ ಹಿಡಿದ ಯುವತಿಯ ಅಶ್ಲೀಲ ಫೋಟೋಗಳು ಪತ್ತೆಯಾಗಿತ್ತು. ಆತನನ್ನು ತರಾಟೆಗೆ ತೆಗೆದುಕೊಂಡಾಗ ತಾನು ಯಾರೆಂದು ಗೊತ್ತಾ? ಪೊಲೀಸರಿಗೆ ಈ ಬಗ್ಗೆ ದೂರು ನೀಡಬೇಡಿ ಎಂದು ಬೆದರಿಕೆಯನ್ನೂ ಒಡ್ಡಿದ್ದಾನೆ ಎಂದು ಯುವತಿ ತಮ್ಮ ದೂರಿನಲ್ಲಿ ಹೇಳಿದ್ದಾಳೆ. ತರಾಟೆಗೆ ತೆಗೆದುಕೊಂಡಾದ ಮೇಲೆ ಆ ವ್ಯಕ್ತಿ ತಾನು ಪೊಲೀಸ್ ಅಧಿಕಾರಿಯೆಂದು ಒಪ್ಪಿಕೊಂಡಿದರು. ಆಮೇಲೆ ನಮಗೆ ಆ ವ್ಯಕ್ತಿ ಎಡಿಜಿಪಿ-ಕೆಎಸ್ಆರ್ಪಿ ಡಾ ಪಿ.ರವೀಂದ್ರ ನಾಥ್ ಎಂಬುದು ತಿಳಿದು ಬಂತು ಎಂದು ಯುವತಿ ಹೇಳಿದ್ದಾಳೆ.

ಪ್ರಸ್ತುತ ಘಟನೆಯ ಬಗ್ಗೆ ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಬಗ್ಗೆ ಡಾ ಪಿ.ರವೀಂದ್ರ ನಾಥ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಆದಾಗ್ಯೂ, ತಾನು ತಪ್ಪು ಮಾಡಿಲ್ಲ, ಈ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ರವೀಂದ್ರನಾಥ್ ತಮ್ಮ ಪದವಿಗೆ ರಾಜಿನಾಮೆಯನ್ನು ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.