ಜಮ್ಮುವಿನಲ್ಲಿ ಅಗ್ನಿ ಅವಘಡ: 4 ಸಾವು

ಜಮ್ಮು: ಜಮ್ಮುವಿನ ಹೊಟೇಲೊಂದರಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಸುಮಾರು 12 ಮಂದಿಗೆ ಸುಟ್ಟ ಗಾಯಗಳಾಗಿವೆ.
ಜಮ್ಮು ನಗರದ ಕೇಂದ್ರ ಶಹೀದೀ ಚೌಕ್ನಿಂದ ಸುಮಾರು ಒಂದು ಕಿ.ಮೀ. ದೂರದಲ್ಲಿರುವ ನಗರದ ಮುಖ್ಯ ಬಸ್ ನಿಲ್ದಾಣದ ಸಮೀಪದ ನೀಲಂ ಹೊಟೇಲ್ನಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಕಾಣಸಿಕೊಂಡು ಕ್ಷಣಾರ್ಧದಲ್ಲೇ ಬೆಂಕಿಯ ತೀವ್ರತೆ ಹೆಚ್ಚಾಗಿ ಇತರ ಕೋಣೆಗಳಿಗೂ ಹಬ್ಬಿದೆ. ಈ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಸುಮಾರು 12 ಜನರಿಗೆ ಗಂಭೀರ ಸುಟ್ಟ ಗಾಯಾಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯರಾತ್ರಿಯ ಬಳಿಕ ಹೊಟೇಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ತೀವ್ರತೆ ಹೆಚ್ಚಾಗಿ ಹೊಟೇಲ್ ತುಂಬೆಲ್ಲ ದಟ್ಟನೆಯ ಹೊಗೆ ತುಂಬಿಕೊಂಡಿದೆ. ಸುದ್ದಿ ತಿಳಿದ ಕೂಡಲೇ ಅಗ್ನಿ ಶಾಮಕಗಳು ಸ್ಥಳಕ್ಕೆ ಧಾವಿಸಿ ಬಂದಿವೆ. ಅಷ್ಟರೊಳಗೆ ಹಬ್ಬಿಕೊಂಡ ಬೆಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಉಳಿದಂತೆ ಗಾಯಾಳುಗಳನ್ನು ಜಮ್ಮು ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊಟೇಲ್ನ ಕೆಳ ಅಂತಸ್ತುನ ದಾಸ್ತುನಾ ಕೋಣೆಯಲ್ಲಿ ವಾಹನಗಳ ಟೈಯರ್ಗಳನ್ನು ಶೇಖರಿಸಿದ್ದು ಇಲ್ಲಿಯೇ ಮೊದಲು ಬೆಂಕಿ ಕಾಣಿಸಿಕೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


