ಈಗಿನ ಸುದ್ದಿ

ಬದೌನ್ ಗ್ಯಾಂಗ್‌ರೇಪ್ ದೆಹಲಿ ಗ್ಯಾಂಗ್‌ರೇಪ್‌ಗಿಂತಲೂ ಕ್ರೂರ

ಬದೌನ್ ಗ್ಯಾಂಗ್‌ರೇಪ್ ದೆಹಲಿ ಗ್ಯಾಂಗ್‌ರೇಪ್‌ಗಿಂತಲೂ ಕ್ರೂರ
Published On :

ಲಕ್ನೋ: ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಇಬ್ಬರು ದಲಿತ ಬಾಲಕಿಯರನ್ನು ಅತ್ಯಾಚಾರಗೈದು ನೇಣು ಬಿಗಿದು ಹತ್ಯೆಗೈದ ಪ್ರಕರಣದಲ್ಲಿ 5ನೇ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.

ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ  ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಲಾಗಿದೆ.

ಘಟನೆ ಏನು? ಮೇ 27ರಂದು 14 ಮತ್ತು 15ರ ಹರೆಯದ ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದರು. ಮರುದಿನ ಉಷೈತ್ ಎಂಬಲ್ಲಿ ಅವರಿಬ್ಬರ ಶವಗಳು ನೇಣು ಹಾಕಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಬಾಲಕಿಯರನ್ನು ಊರಿನ ಗೂಂಡಾ ಒಬ್ಬ ಅತ್ಯಾಚಾರಗೈದಿದ್ದಾನೆ ಎಂದು ಕುಟುಂಬಗಳು ದೂರಿದ್ದವು.

ಪ್ರಕರಣದಲ್ಲಿ ಏಳು ಮಂದಿ ಆರೋಪಿಗಳಿದ್ದು, ಇದರಲ್ಲಿ 5 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ.  ಅದರಲ್ಲಿ ಸರ್ವೇಶ್ ಯಾದವ್  ಮತ್ತು ಛತ್ರಪಾಲ್ ಯಾದವ್ ಎಂಬ ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ಪಪ್ಪು, ಅವ್‌ದೇಶ್ ಯಾದವ್ , ಉರ್ವೇಶ್ ಯಾದವ್‌ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಹತ್ಯಾಚಾರಕ್ಕೊಳಗಾದ ಬಾಲಕಿಯರ ಕುಟುಂಬ ತಮಗೇನೂ ಪರಿಹಾರ ಬೇಕಾಗಿಲ್ಲ, ನಮ್ಮ ಮಕ್ಕಳಿಗೆ ನ್ಯಾಯ ಸಿಕ್ಕಿದರೆ ಸಾಕು ಎಂದು ಹೇಳಿದ್ದಾರೆ.
ಮಾತ್ರವಲ್ಲದೆ ಉತ್ತರ ಪ್ರದೇಶ ಸರ್ಕಾರದ ಮೇಲೆ ನಮಗೆ ಯಾವುದೇ ನಂಬಿಕೆಯಿಲ್ಲ ಪ್ರಸ್ತುತ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇದು ದೆಹಲಿಯಲ್ಲಿ ನಡೆದ ಹತ್ಯಾಚಾರಕ್ಕಿಂತಲೂ ಕ್ರೂರವಾದುದು ಎಂದು ಬಾಲಕಿಯ ಕುಟುಂಬದವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.